ಹೋಂ ಕ್ವಾರಂಟೈನ್ನಕನ್ನು ಭೇಟಿ

ಪಡುಬಿದ್ರಿಯ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಹೋಂ ಕ್ವಾರಂಟೈನ್ನಕನ್ನು ಪೂರೈಸುತ್ತಿರುವವರ ಮನೆಗಳಿಗೆ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಶುಕ್ರವಾರ ಭೇಟಿ ಮಾಡಿ ಪರಿಶೀಲಿಸಿದರು. ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿ ಡಾ. ರಾಜಶ್ರೀ ಕಿಣಿ ಅವರೊಂದಿಗೆ ಸಮಾಲೋಚಿಸಿದ ಜಿಲ್ಲಾಧಿಕಾರಿ ಅವರು ಅಲ್ಲಿನ ಸ್ಥಿತಿಗತಿಗಳನ್ನು ವೀಕ್ಷಿಸಿದರು.