ಹೋಂ ಕ್ವಾರಂಟೈನ್ ಇದ್ದವರಿಗೆ ಮೆಡಿಕಲ್ ಕಿಟ್ ವಿತರಣೆಗೆ ಚಾಲನೆ

ಮಾನ್ವಿ.ಮೇ.೨೧ – ಕೋವಿಡ್ ಸೋಂಕಿನಿಂದ ಮನೆಯಲ್ಲೇ ಪ್ರತ್ಯೇಕವಾಗಿ (ಹೋಂ ಕ್ವಾರಂಟೈನ್) ಚಿಕಿತ್ಸೆ ಪಡೆಯುತ್ತಿರುವ ಬಡ ಮತ್ತು ಮಧ್ಯಮ ವರ್ಗದ ರೋಗಿಗಳಿಗೆ ಯುವ ಕಾಂಗ್ರೆಸ್ ವತಿಯಿಂದ ಮೆಡಿಕಲ್ ಕಿಟ್ ವಿತರಿಸುವ ಕಾರ್ಯಕ್ಕೆ ಶುಕ್ರವಾರ ತಾಲೂಕ ಕಾಂಗ್ರೆಸ್ ಕಚೇರಿಯಲ್ಲಿ ಚಾಲನೆ ನೀಡಲಾಯಿತು.
ಈ ಕುರಿತು ಮಾಹಿತಿ ನೀಡಿದ ಮಾನ್ವಿ ತಾಲೂಕ ಯುವ ಕಾಂಗ್ರೆಸ್‌ಅಧ್ಯಕ್ಷ ವಿಶಾಂತ್ ಈರಣ್ಣ, ಹೋಮ್ ಕ್ವಾರಂಟೈನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿ ಗಳಿಗೆ ಅಗತ್ಯ ಔಷಧಿಯ ಕಿಟ್‌ಗಳನ್ನು ನೀಡಲು ಯುವ ಕಾಂಗ್ರೆಸ್ ರಾಜ್ಯ ಸಮಿತಿ ನಿರ್ಧರಿಸಿದೆ. ಹೀಗಾಗಿ ನಗರ ಯುವ ಕಾಂಗ್ರೆಸ್ ವತಿಯಿಂದ ನಗರದ ವಿವಿಧ ಬೂತ್ ಮಟ್ಟದಲ್ಲಿ ಆಯ್ದ ಮುಖಂಡರು, ಕಾರ್ಯಕರ್ತರ ಮೂಲಕ ರೋಗಿಗಳ ಮನೆ ಬಾಗಿಲಿಗೆ ಮೆಡಿಕಲ್ ಕಿಟ್ ತಲುಪಿಸಲಿದ್ದಾರೆ ಎಂದರು.
ಕಾಂಗ್ರೆಸ್ ಮಾಜಿ ಶಾಸಕರು ಜಿ.ಹಂಪಯ್ಯ ನಾಯಕ ಮಾತನಾಡಿ, ರಾಜ್ಯ ಯುವ ಕಾಂಗ್ರೆಸ್ ಮಾನ್ವಿ ನಗರಕ್ಕೆ ಹೋಂ ಕ್ವಾರಂಟೈನ್ ಮೆಡಿಕಲ್ ಕಿಟ್‌ಗಳನ್ನು ನೀಡಿದ್ದು, ಅದನ್ನು ಬೂತ್ ಮಟ್ಟದಲ್ಲಿ ಹೋಂ ಕ್ವಾರಂಟೈನ್ ಇರುವವರಿಗೆ ಹಂಚಲಾಗುತ್ತಿದೆ. ಅದರಲ್ಲಿರುವ ಔಷಧಿಗಳನ್ನು ಸಂಬಂಧಿಸಿದ ವೈದ್ಯರ ಸಲಹೆ ಮೇರೆಗೆ ತೆಗೆದುಕೊಳ್ಳುವಂತೆ ವೈದ್ಯರ ದೂರವಾಣಿ ಸಂಖ್ಯೆಗಳನ್ನು ಸಹ ಕಿಟ್‌ನಲ್ಲಿ ಇರಿಸಲಾಗಿದೆ ಎಂದು ಹೇಳಿದರು.
ಕೇವಲ ಸುಳ್ಳು ಹೇಳಿ ಜನರನ್ನು ದಿಕ್ಕು ತಪ್ಪಿಸುತ್ತಿರುವ ಬಿಜೆಪಿ ಸರ್ಕಾರ ಕೊರೊನಾ ನಿಯಂತ್ರಿಸುವಲ್ಲಿ ವಿಫಲವಾಗಿದೆ. ಹೀಗಾಗಿ ಕಾಂಗ್ರೆಸ್ ಜನರಿಗೆ ನೆರವಾಗುವ ದೃಷ್ಟಿಯಿಂದ ಈ ಕಾರ್ಯಕ್ರಮ ರೂಪಿಸಿದೆ ಎಂದು ಹೇಳಿದರು.