ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳ ಉತ್ತಮ ಸಾಧನೆ

ತಾಳಿಕೋಟೆ:ಆ.27: ತಾಲೂಕಿನ ತುಂಬಗಿ ಗ್ರಾಮದಲ್ಲಿ ನಡೆದ ತಾಳಿಕೋಟೆ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಪಟ್ಟಣದ ಶ್ರೀ ಬ್ರಹ್ಮಲಿಂಗೇಶ್ವರ ಅನುದಾನಿತ ಪ್ರಾಥಮಿಕ ಶಾಲೆಯ ವಿಧ್ಯಾರ್ಥಿಗಳು ಕಬ್ಬಡ್ಡಿ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಪಡೆಯುವದರೊಂದಿಗೆ ಉತ್ತಮ ಸಾಧನೆ ಮಾಡಿ ತಾಲೂಕಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ವಿಧ್ಯಾರ್ಥಿಗಳ ಸಾಧನೆಗೆ ಶ್ರೀ ಸಂಗಮಾರ್ಯ ವಿಧ್ಯಾ ಸಂಸ್ಥೆಯ ಅಧ್ಯಕ್ಷ ಎಚ್.ಎಸ್.ಪಾಟೀಲ, ಕಾರ್ಯದರ್ಶಿ ನ್ಯಾಯವಾದಿ ಸಚೀನ ಪಾಟೀಲ, ರವಿಗೌಡ ಪಾಟೀಲ, ಮುಖ್ಯಗುರುಗಳಾದ ಜೆ.ಎಂ.ಕೊಣ್ಣೂರ, ದೈಹಿಕ ಶಿಕ್ಷಕ ಎಸ್.ಎಸ್.ಪಾಟೀಲ, ಎಂ.ಎಸ್.ಬಿರಾದಾರ ಹಾಗೂ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.