ಹೋರಾಟಗಾರರ ತ್ಯಾಗದಿಂದ ಸ್ವಾತಂತ್ರ್ಯ

(ಸಂಜೆವಾಣಿ ಪ್ರತಿನಿಧಿಯಿಂದ)ಬಳ್ಳಾರಿ, ಆ.15: ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನದ ಫಲವಾಗಿ ನಾವಿಂದು  ಸ್ವಾತಂತ್ರ್ಯದ ಸವಿಯನ್ನು ಅನುಭವಿಸುತ್ತಿದ್ದೇವೆ ಎಂದು ಬಳ್ಳಾರಿ ಜಿಲ್ಲೆಯ ಇತಿಹಾಸ ಅಕಾಡೆಮಿ ಅಧ್ಯಕ್ಷರು, ಜನಪದ ಕಲಾವಿದರಾದ ಟಿ ಹೆಚ್ ಎಂ ಬಸವರಾಜ್ ಅಭಿಪ್ರಾಯ ಪಟ್ಟರು.ಅವರು ಇಂದು ನಗರದಲ್ಲಿನ ಕನ್ನಡ ಸಾಹಿತ್ಯ ಪರಿಷತ್ತಿನ ಬಳ್ಳಾರಿ ಜಿಲ್ಲಾ ಘಟಕವು ಕನ್ನಡ ಭವನದಲ್ಲಿ ಏರ್ಪಡಿಸಿದ್ದ  ರಾಷ್ಟ್ರ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಅವರು  ಪ್ರತಿಯೊಬ್ಬರೂ ದೇಶಾಭಿಮಾನ ಬೆಳೆಸಿಕೊಂಡು ದೇಶದ ಸಮಗ್ರತೆ ಮತ್ತು ಐಕ್ಯತೆಗೆ ಶ್ರಮಿಸಬೇಕೆಂದು ಕರೆ ನೀಡಿದರು.ರಾಷ್ಟ್ರಧ್ವಜಾರೋಹಣವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಡಾ. ನಿಷ್ಠಿ ರುದ್ರಪ್ಪ ನೆರವೇರಿಸಿದರು.ಕವಿಗಳಾದ ಅಜಯ್ ಬಣಕಾರ್, ರಾಮಚಂದ್ರ, ಮಹೇಶ್ ಜೋಶಿ. ಹಾಸ್ಯ ಕಲಾವಿದ ಎ. ಎರ್ರಿಸ್ವಾಮಿ ಹಳ್ಳಿ, ಚಿತ್ರಕಲಾವಿದ ಮಂಜುನಾಥ ಗೋವಿಂದವಾಡ,  ಖ್ಯಾತ ಜನಪದ ಗಾಯಕ ಯಲ್ಲನಗೌಡ ಶಂಕರ ಬಂಡೆ, ಮತ್ತಿತರರು ಉಪಸ್ಥಿತರಿದ್ದರು.ಇದೇ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಹಿರಿಯ ಜನಪದ ಕಲಾವಿದ ಟಿ ಹೆಚ್ ಎಂಬಸವರಾಜ್ ಅವರನ್ನುಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸನ್ಮಾನಿಸಲಾಯಿತು. ಕಸಾಪಗೌರವ ಕಾರ್ಯದರ್ಶಿ ಡಾ. ಕೆ ಶಿವಲಿಂಗಪ್ಪ ಹಂದಿಹಾಳು ಸ್ವಾಗತಿಸಿದರು. ಬಳ್ಳಾರಿ ತಾಲೂಕು ಕಸಾಪ ಅಧ್ಯಕ್ಷ ಕೆ ವಿ ನಾಗರೆಡ್ಡಿ ವಂದನಾರ್ಪಣೆ ಸಲ್ಲಿಸಿದರು.