
ಅಥಣಿ :ಮಾ.5: ತಾಲೂಕಿನಲ್ಲಿ ಎಲ್ಲರೂ ಶಾಂತಿ ಸೌಹಾರ್ದತೆಯಿಂದ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹೋಳಿ ಮತ್ತು ಷಬ್-ಎ-ಬರಾತ್ (ಬಡಿರಾತ) ಹಬ್ಬವನ್ನು ಆಚರಿಸಬೇಕು ಎಂದು ಅಥಣಿ ಡಿವೈಎಸ್ಪಿ ಶ್ರೀಪಾದ ಜಲ್ದೆ ಅವರು ಹೇಳಿದರು.
ಅವರು ಶನಿವಾರ ಪಟ್ಟಣದ ಪೆÇಲೀಸ್ ಠಾಣೆಯ ಆವರಣದಲ್ಲಿ ಹಮ್ಮಿಕೊಂಡಿದ್ದ ಹೋಳಿ ಹಬ್ಬ ಮತ್ತು ಷಬ್-ಎ-ಬರಾತ್ (ಬಡಿರಾತ) ಹಬ್ಬದ ಪ್ರಯುಕ್ತ ಸೌಹಾರ್ದ ಶಾಂತಿ ಪಾಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅವರು ಮುಂದೆ ಮಾತನಾಡುತ್ತಾ ಹೋಳಿ ಹಬ್ಬ ಹಾಗೂ ಷಬ್-ಎ-ಬರಾತ್ ಹಬ್ಬಗಳು ಒಟ್ಟಿಗೆ ಬಂದಿರುವುದರಿಂದ ತಾಲೂಕಿನಲ್ಲಿ ಹಾಗೂ ಪಟ್ಟಣದಲ್ಲಿ ನಮಾಜ ಪ್ರಾರ್ಥನೆ ಸಲ್ಲಿಸುವುದು ಮತ್ತು ಕಾಮದಹನ ಮಾಡುವುದರಿಂದ ಕೆಲವು ಕಡೆ ಕೀಡಿಗೇಡಿಗಳಿಂದ ಯಾವುದೇ ರೀತಿಯ ಅವಗಡಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸ್ಥಳದಲ್ಲಿದ್ದ ಪೆÇಲೀಸ ಅಧಿಕಾರಿಗಳಿಗೆ ಸೂಚಿಸಿದರು,
ರಾತ್ರಿಯ ವೇಳೆಯಲ್ಲಿ ರಸ್ತೆಗಳಲ್ಲಿ ಓಡಾಡುವುದು, ಸುತ್ತಾಡುವುದು ಮಾಡಬಾರದು. ಹೆಚ್ಚಾಗಿ ಹಿರಿಯರಿಗಿಂತ ಯುವಕರು ಕಾನೂನು ವ್ಯಾಪ್ತಿ ಮೀರಿ ಸಂಭ್ರಮಿಸುವ ಘಟನೆಗಳಲ್ಲಿ ತೊಡಗಿಕೊಳ್ಳುತ್ತಾರೆ. ಹಾಗಾಗಿ ಎರಡು ಸಮುದಾಯದ ಮುಖಂಡರು ಯುವಕರಿಗೆ ಬುದ್ಧಿವಾದ ಹೇಳಿ ಮಾರ್ಗದರ್ಶನ ನೀಡಬೇಕು ಎಂದರು.
ನಂತರ ಪಿಎ??? ಶಿವಶಂಕರ ಮುಕರಿ ಮಾತನಾಡಿ ಕಾನೂನುಬಾಹಿರ ಚಟುವಟಿಕೆಗಳು ನಡೆಯುತ್ತಿರುವುದು ಕಂಡುಬಂದಲ್ಲಿ ಪೆÇೀಲೀಸರ ಗಮನಕ್ಕೆ ತರಬೇಕು ಯಾರು ಕೂಡ ಕಾನೂನು ಕೈಗೆತ್ತಿಕೊಳ್ಳಬಾರದು. ತುರ್ತು ಸಂದರ್ಭಗಳಲ್ಲಿ 112 ಸಹಾಯವಾಣಿಗೆ ಸಂಪರ್ಕಿಸಿ ಮಾಹಿತಿ ನೀಡಬಹುದು. ದ್ವಿಚಕ್ರವಾಹನದ ಸೈಲೆಂಸರ್ ಮೂಲಕ ಹೆಚ್ಚಿನ ಶಬ್ದ ಮಾಲಿನ್ಯ ಉಂಟು ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡಬಾರದು, ಅಂತಹ ಘಟನೆಗಳು ಕಂಡುಬಂದಲ್ಲಿ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು.
ಈ ವೇಳೆ ಪುರಸಭೆ ಸದಸ್ಯರಾದ ಕಲ್ಲೇಶ್ ಮಡ್ಡಿ ಹಾಗೂ ವಿನಯ ಪಾಟೀಲ ಮಾತನಾಡಿ, ಹೋಳಿ ಹಬ್ಬ ಹಾಗೂ ಬಡಿರಾತ ಹಬ್ಬವನ್ನು ಎಲ್ಲರೂ ಶಾಂತ ರೀತಿಯಿಂದ ಆಚರಿಸಬೇಕು, ಯುವಕರು ಹಾಗೂ ಮಕ್ಕಳು ಒತ್ತಾಯಪೂರ್ವಕವಾಗಿ ಯಾರಿಗೂ ಬಣ್ಣವನ್ನು ಹಚ್ಚಬಾರದು, ಪರೀಕ್ಷಾ ಸಮಯ ಇರುವುದರಿಂದ ವಿದ್ಯಾರ್ಥಿ / ವಿದ್ಯಾರ್ಥಿನಿಯರಿಗೆ ಯಾವುದೇ ರೀತಿಯ ತೊಂದರೆಯಾಗದ ರೀತಿಯಲ್ಲಿ ಪೆÇೀಲೀಸರು ಯುವಕರಲ್ಲಿ ಜಾಗೃತಿ ಮೂಡಿಸಬೇಕು, ಯುವಕರು ರಾಸಾಯನಿಕ ಬಣ್ಣಗಳನ್ನು ಉಪಯೋಗಿಸಬೇಡಿ, ಪರಿಸರ ಸ್ನೇಹಿ ಬಣ್ಣಗಳನ್ನು ಉಪಯೋಗಿಸಿ, ಎಂದು ಮನವಿ ಮಾಡಿದರು,
ಈ ವೇಳೆ ಪಿಎ??? ಎಫ್ ಎಸ್ ಇಂಡೀಕರ, ಜಿಪಂ ಅಧಿಕಾರಿ ಈರಣ್ಣ ವಾಲಿ, ಮುಖಂಡರಾದ, ಸೈಯದ್ ಗಡ್ಡೇಕರ, ಅಯಾಜ ಮಾಸ್ಟರ ಸೈಯದಅಮೀನ್ ಗದ್ಯಾಳ, ಆಸೀಫ್ ತಾಂಬೋಳಿ, ಮಹಾಂತೇಶ ಬಾಡಗಿ, ಶಿವಾನಂದ ಸೌದಾಗರ, ಶಬ್ಬೀರ್ ಸಾತಬಚ್ಚೆ, ಶ್ರೀಶೈಲ ಹಳದಮಳ್ಳ, ಇಮ್ರಾನ್ ಪಟಾಯತ್, ಸೇರಿದಂತೆ ಹಲವರು ಉಪಸ್ಥಿತರಿದ್ದರು,