ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನೂತನ ಚಿತ್ರಕ್ಕೆ ನಾಳೆ ಮುಹೂರ್ತ

ಬೆಂಗಳೂರು, ನ 18 – ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹೊಸ ಸಿನಿಮಾದ ಮುಹೂರ್ತ ಸಮಾರಂಭ ನಾಳೆ ನಡೆಯಲಿದೆ.

ಈ ಚಿತ್ರದ ಮೂಲಕ ಮತ್ತೆ ಧನಂಜಯ್ ಮತ್ತು ಶಿವಣ್ಣ ಜೋಡಿ ಒಟ್ಟಿಗೆ ಅಭಿಮಾನಿಗಳ ಮುಂದೆ ಬರಲಿದೆ. ಟಗರು ಸಿನಿಮಾದಲ್ಲಿ ಮೋಡಿ ಮಾಡಿದ್ದ ಜೋಡಿ ಇದೀಗ ಮತ್ತೆ ಅಭಿಮಾನಿಗಳ ಮುಂದೆ ಬರ್ತಿರುವುದು ಸಿನಿಮಾದ ಮೇಲಿನ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ.

ಚಿತ್ರದಲ್ಲಿ ದಿಯಾ ಸಿನಿಮಾ ಮೂಲಕ ಕನ್ನಡ ಸಿನಿಮಾ ಪ್ರೇಕ್ಷಕರ ಮನಗೆದ್ದಿರುವ ನಟ ಪೃಥ್ವಿ ಅಂಬರ್ ಕೂಡ ನಟಿಸಲಿದ್ದಾರೆ. ತಮಿಳು ನಿರ್ದೇಶಕ ವಿಜಯ್ ಮಿಲ್ಟನ್ ಆಕ್ಷನ್ ಕಟ್ ಹೇಳುತ್ತಿದ್ದಾರೆ.

ಚಿತ್ರಕ್ಕೆ ಖ್ಯಾತ ಸಂಗೀತ ನಿರ್ದೇಶಕ ಅನೂಪ್ ಸೀಳಿನ್ ಸಂಗೀತ ನೀಡುತ್ತಿದ್ದಾರೆ. ಗುರುವಾರ ಮುಹೂರ್ತ ನಡೆಸಲಿರುವ ಚಿತ್ರತಂಡ ಶೀಘ್ರದಲ್ಲೇ ಚಿತ್ರೀಕರಣ ಪ್ರಾರಂಭಿಸಲಿದೆಯಂತೆ