ಹ.ಬೊ.ಹಳ್ಳಿ ಶಾಸಕರ ವಿರುದ್ಧ ಕ್ರಮಕ್ಕೆ ಒತ್ತಾಯ

ಸಂಡೂರು :ನ:10 ಅಧಿಕಾರದ ಅಸೆಗೆ ಬಿಜೆಪಿ ಕಾರ್ಯಕರ್ತರ ಮೇಲೆ ಪ್ರಜಾಪ್ರಭುತ್ವ ರಕ್ಷಿಸಬೇಕಾದ ಶಾಸಕ ಭೀಮನಾಯ್ಕ ಅವರು ಹಲ್ಲೆ ಮಾಡುವ ಮಟ್ಟಕ್ಕೆ ಹೋಗಿರುವುದು ಎಷ್ಟು ಸರಿ , ಅವರ ಮೇಲೆ ಕ್ರಮ ಜರುಗಿಸಬೇಕು ಇಲ್ಲವಾದಲ್ಲಿ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ಮಾಡುತ್ತದೆ ಎಂದು ತಾಲೂಕು ಬಿ.ಜೆ.ಪಿ ಅಧ್ಯಕ್ಷ ಜಿ.ಟಿ. ಪಂಪಾಪತಿ ಒತ್ತಾಯಿಸಿದರು.
ಅವರು ಪಟ್ಟಣದ ತಾಲೂಕು ಕಛೇರಿಯಲ್ಲಿ ತಹಶೀಲ್ದಾರ್ ರಶ್ಮಿ.ಹೆಚ್.ಜಿ.ಅವರಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿ ಹಗರಿಬೊಮ್ಮನಹಳ್ಳಿ ಶಾಸಕ ಭೀಮನಾಯ್ಕ ಅವರ ಗೂಂಡಾವರ್ತನೆ ಪ್ರಜಾಪ್ರಭುತ್ವಕ್ಕೆ ಮಾಡಿದ ಅವಮಾನವಾಗಿದೆ, ಹಗರಿಬೊಮ್ಮನಹಳ್ಳಿ ಪುರಸಭೆಗೆ ಅಧ್ಯಕ್ಷ ಉಪಾಧ್ಯಕ್ಷರ ಅಯ್ಕೆ ಸಂದರ್ಭದಲ್ಲಿ ದರ್ಪದಿಂದ ವರ್ತಿಸಿ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ, ಅಲ್ಲದೆ ಬಿಜೆಪಿ ಪದಾಧಿಕಾರಿಗಳ ಮೇಲೆ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ, ಈ ಸಂದರ್ಭದಲ್ಲಿ ಬಿಜೆಪಿ ಎಸ್ಟಿ ಮೋರ್ಚಾ ಅಧ್ಯಕ್ಷ ಪ್ರಕಾರ್ಶ ಪೂಜಾರ್ ಅವರ ಮೇಲೆ ಹಲ್ಲೆಯನ್ನು ಮಾಡಿ ಗಾಯಗೊಳಿಸಿದ್ದಾರೆ. ಅದ್ದರಿಂದ ಅವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕು ಇಂತಹ ಘಟನೆಗಳಿಗೆ ಯಾರೂ ಸಹ ಅವಕಾಶ ನೀಡಬಾರದು ಪ್ರಜಾಪ್ರಭುತ್ವ ಪಾಲನೆ ಪ್ರತಿಯೊಬ್ಬರ ಅದ್ಯ ಕರ್ತವ್ಯವಾಗಿದೆ ಅಲ್ಲದೆ ಇಂದು ಗೂಂಡಾವರ್ತನೆ ಮಾಡುವವರ ಮೇಲೆ ಕ್ರಮ ವಹಿಸಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ತಾಲೂಕು ಬಿಜೆಪಿ ಘಟಕದ ಪದಾಧಿಕಾರಿಗಳು ತಾ.ಪಂ ಸದಸ್ಯ ಹನುಮಂತಪ್ಪ, ಪುರಸಭೆಯ ಸದಸ್ಯರು, ಮಹಿಳಾ ಘಟಕದ ಅಧ್ಯಕ್ಷರು ಪದಾಧಿಕಾರಿಗಳು ಉಪಸ್ಥಿತರಿದ್ದು ಮನವಿ ಪತ್ರ ಸಲ್ಲಿಸಿದರು.