೧೦೦ ಕೋ ರೂ ಕಪ್ಪ ಕಾಣಿಕೆ ಗೃಹ ಸಚಿವರ ವಿರುದ್ಧ ಸಿಬಿಐ ತನಿಖೆ

ಮುಂಬೈ.ಏ.೫- ಭ್ರಷ್ಟಾಚಾರದ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಗೃಹಸಚಿವ ಅನಿಲ್ ದೇಶ್ ಮುಖ್ ವಿರುದ್ಧ ಸಿಬಿಐ ತನಿಖೆ ನಡೆಸಲು ಬಾಂಬೆ ಹೈಕೋರ್ಟ್ ಹಸಿರು ನಿಶಾನೆ ತೋರಿದೆ.
೧೫ ದಿನಗಳ ಒಳಗಾಗಿ ತನಿಖೆ ನಡೆಸಿ ಪ್ರಾಥಮಿಕ ವರದಿ ಸಲ್ಲಿಸುವಂತೆ ಬಾಂಬೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಿಜೆ ದತ್ತ ಅವರಿದ್ದ ನ್ಯಾಯಪೀಠ ಇಂದು ಸಿಬಿಐಗೆ ಸೂಚನೆ ನೀಡಿದೆ.
ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಂಬೀರ್ ಸಿಂಗ್ ಅವರು ಮಾಡಿದ್ದ ೧೦೦ ಕೋಟಿ ರೂಪಾಯಿಗಳ ಭ್ರಷ್ಟಾಚಾರದ ಆರೋಪದ ಹಿನ್ನೆಲೆಯಲ್ಲಿ ಈ ತನಿಖೆಗೆ ಆದೇಶಿಸಿದೆ.
ಮಾಜಿ ಪೊಲೀಸ್ ಆಯುಕ್ತ ಪರಂ ಬೀರ್ ಸಿಂಗ್ ಸೇರಿದಂತೆ ವಿವಿಧ ಅರ್ಜಿಗಳ ವಿಚಾರಣೆ ನಡೆಸಿದ ಹೈಕೋರ್ಟ್ ಇಂದಿಗೆ ಕಾಯ್ದಿರಿಸಿತ್ತು.
ಇಂದು ವಿಚಾರಣೆ ಕೈಗೆತ್ತಿಕೊಂಡ ಬಾಂಬೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಿ ಜೆ ದತ್ತ ಅವರು, ಭ್ರಷ್ಟಾಚಾರದ ಆರೋಪವನ್ನು ಮಾಡುವ ಬದಲು ಯಾಕೆ ಈ ಸಂಬಂಧ ಸಚಿವರ ವಿರುದ್ಧ ಎಫ್ ಐ ಆರ್ ದಾಖಲು ಮಾಡಲಿಲ್ಲ ಎಂದು ಮಾಜಿ ಪೊಲೀಸ್ ಆಯುಕ್ತರನ್ನು ನ್ಯಾಯಾಲಯ ಪ್ರಶ್ನಿಸಿದೆ.
ಪೊಲೀಸ್ ಆಯುಕ್ತರಾಗಿ ನೀವು ಯಾಕೆ ನೀವು ಕಾನೂನು ಪಾಲಿಸಲಿಲ್ಲ ಎಂದು ಕೂಡ ಹೈಕೋರ್ಟ್ ಮಾಜಿ ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದೆ.
ನೀವು ಮಾಡುವ ಆರೋಪಗಳು ಕಾನೂನಿಗಿಂತ ದೊಡ್ಡವುದೇ ಎಂದು ಕೂಡ ಪೊಲೀಸ್ ಮಾಜಿ ಆಯುಕ್ತರನ್ನು ಪ್ರಶ್ನೆ ಮಾಡಿದೆ
ರಾಜೀನಾಮೆ ಸಾದ್ಯತೆ;
ಬಾಂಬೆ ಹೈಕೋರ್ಟ್ ಸಿಬಿಐ ತನಿಖೆಗೆ ಆದೇಶ ಹೊರಡಿಸಿರುವ ಹಿನ್ನಲೆಯಲ್ಲಿ ಗೃಹಸಚಿವ ಅನಿಲ್ ದೇಶಮುಖ್ ಅವರು ಸಮಸ್ಯೆಗೆ ಸಿಲುಕಿದ್ದಾರೆ. ತನಿಖೆ ಪೂರ್ಣಗೊಳ್ಳುವ ತನಕ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಗಳು ಹೆಚ್ಚಿವೆ.
ಈಗಾಗಲೇ ಪ್ರಮುಖ ವಿರೋಧ ಪಕ್ಷ ಬಿಜೆಪಿ ಗ್ರುವ ಸಚಿವ ಅನಿಲ್ ದೇಶ್‌ಮುಖ್ ಅವರ ರಾಜೀನಾಮೆಗೆ ಒತ್ತಾಯಿಸಿತ್ತು.