೧೦ ರಾಜ್ಯಗಳಲ್ಲಿ ಶೇ.೭೯ ರಷ್ಟು ಸೋಂಕು

ನವದೆಹಲಿ, ಏ.೧೬- ದೇಶದಲ್ಲಿ ನಿತ್ಯ ದಾಖಲಾಗುತ್ತಿರುವ ಕೊರೊನಾ ಸೋಂಕು ಪ್ರಕರಣಗಳ ಪೈಕಿ ೧೦ ರಾಜ್ಯಗಳಲ್ಲಿ ಶೇಕಡ ೭೯.೧೦ರಷ್ಟು ಇದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
ಮಹಾರಾಷ್ಟ್ರ ,ಕರ್ನಾಟಕ, ತಮಿಳುನಾಡು, ಕೇರಳ, ಉತ್ತರಪ್ರದೇಶ, ಛತ್ತಿಸ್‌ಗಢ, ದೆಹಲಿ, ಮಧ್ಯಪ್ರದೇಶ ಗುಜರಾತ್ ಮತ್ತು ಪಶ್ಚಿಮ ಬಂಗಾಳದಲ್ಲಿ ಅತ್ಯಧಿಕ ಸೋಂಕು ಸಂಖ್ಯೆ ದಿನನಿತ್ಯ ದಾಖಲಾಗುತ್ತಿದೆ ಆತಂಕಕ್ಕೆ ಎಡೆಮಾಡಿದೆ ಎಂದು ಸಚಿವಾಲಯ ತಿಳಿಸಿದೆ.
ಇಂದು ೮ ಗಂಟೆ ತನಕ ೨ಲಕ್ಷ ೧೭ ಸಾವಿರಕ್ಕೂ ಅಧಿಕ ಮಂದಿಗೆ ಸೋಂಕು ಕಾಣಿಸಿಕೊಂಡಿದ್ದು ಮತ್ತು ರಾಜ್ಯಗಳಲ್ಲಿ ಶೇಕಡಾ ೭೦.೧೦ ಸೋಂಕು ಕಾಣಿಸಿಕೊಂಡಿದೆ. ಇದು ಆತಂಕದ ಬೆಳವಣಿಗೆ ಎಂದು ಹೇಳಿದೆ.
ಸೋಂಕು ಹೆಚ್ಚುತ್ತಿರುವ ರಾಜ್ಯಗಳಲ್ಲಿ ಅದರ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಪ್ರಮಾಣ ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ಸಚಿವಾಲಯ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಕ್ಕೆ ಎಚ್ಚರಿಕೆ ನೀಡಿದೆ.
ದೇಶದಲ್ಲಿ ಮೊದಲ ಹಂತದ ಕೊರೊನಾ ಸೋಂಕಿನ ಅಲೆಗಿಂತ ಎರಡನೇ ಹಂತದ ಕೊರೊನಾ ಅಲೆ ಮಿತಿಮೀರಿದೆ. ಇದರಿಂದಾಗಿ ದೇಶದಲ್ಲಿ ದಿನದಿಂದ ದಿನಕ್ಕೆ ದಾಖಲೆ ಪ್ರಮಾಣದಲ್ಲಿ ಸೋಂಕು ಕಾಣಿಸಿಕೊಳ್ಳುತ್ತದೆ ಎಂದು ಸಚಿವಾಲಯ ಹೇಳಿದೆ.
ಸೋಂಕು ನಿಯಂತ್ರಣ ಮಾಡುವ ಸಲುವಾಗಿ ಕರ್ನಾಟಕ-ಮಹಾರಾಷ್ಟ್ರ, ದೆಹಲಿ, ರಾಜಸ್ಥಾನ, ಮಧ್ಯಪ್ರದೇಶ ಸೇರಿದಂತೆ ದೇಶದ ಅನೇಕ ರಾಜ್ಯಗಳು ರಾತ್ರಿ ಕರ್ಫ್ಯೂ ಸೇರಿದಂತೆ ಅನೇಕ ಬಿಗಿ ಕ್ರಮಗಳನ್ನು ಕೈಗೊಂಡಿವೆ. ಹೀಗಿದ್ದರೂ ಸೋಂಕು ಪ್ರಮಾಣ ನಿತ್ಯ ಏರಿಕೆಯಾಗುತ್ತಿದೆ. ಇದು ಮತ್ತಷ್ಟು ಆತಂಕಕ್ಕೆ ಸಿಗುವಂತೆ ಮಾಡಲಿ ಎಂದು ಸಚಿವಾಲಯ ತಿಳಿಸಿದೆ.