೧೦ ಸಾವಿರ ಮಂದಿಗೆ ಸೋಂಕು

ನವದೆಹಲಿ,ಏ.೧೩- ದೇಶದಲ್ಲಿ ದಿನ ನಿತ್ಯ ಕೊರೊನಾ ಸೋಂಕು ಸಂಖ್ಯೆ ಹಾವು ಏಣಿ ಆಟ ಆಡುತ್ತಿರುವ ನಡುವೆಯೇ ಒಂದು ವರ್ಷದ ಬಳಿಕ ಬರೋಬ್ಬರಿ ೧೦ ಸಾವಿರಕ್ಕಿಂತ ಹೆಚ್ಚಿನ ಮಂದಿಯಲ್ಲಿ ಕೊರೊನಾ ಕು ಕಾಣಿಸಿಕೊಂಡಿರುವುದು ಆತಂಕಕ್ಕೆ ಎಡೆ ಮಾಡಿದೆ.ಜೊತೆಗೆ ಕೊರೊನಾ ಸೋಂಕಿನಿಂದ ೧೯ ಮಂದಿ ಸಾವನ್ನಪ್ಪಿದ್ದಾರೆ.ದೇಶದಲ್ಲಿ ನಿನ್ನೆ ದಾಖಲಾಗಿದ್ದ ಕೊರೊನಾ ಸೋಂಕಿಗಿಂತ ಶೇ.೩೦ ರಷ್ಟು ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಕಳೆದ ೨೪ ಗಂಟೆಗಳ ಅವಧಿಯಲ್ಲಿ ೧೦,೧೫೮ ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
ಕಳೆದ ಎರಡು ಮೂರು ದಿನಗಳಿಂದ ಇಳಿಕೆಯಾಗಿದ್ದ ಕೊರೊನಾ ಸೋಂಕು ಕಳೆದ ೨೪ ಗಂಟೆಗಳಲ್ಲಿ ದಿಢೀರನೆ ಏರಿಕೆ ಕಂಡಿರುವುದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಆತಂಕಕ್ಕೆ ಕಾರಣವಾಗಿದೆ. ಕಳೆದ ೨೪ ಗಂಟೆಯ ಅವಧಿಗಳಲ್ಲಿ ೧೦,೧೫೮ ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ ೪೪,೯೯೮ ದಾಟಿದೆ ಎಂದು ಸಚಿವಾಲಯ ತಿಳಿಸಿದೆ. ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಇದೇ ವೇಳೆ ೪,೬೯೨ ಮಂದಿ ಸೋಂಕಿನಿಂದ ಚೇತರಿಸಿಕೊಂಡು ಬಿಡುಗಡೆಯಾಗಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.
ಸೋಂಕಿನಿಂದ ಹೊಸದಾಗಿ ೪ ಸಾವಿರಕ್ಕೂ ಮಂದಿ ಚೇತರಿಸಿಕೊಂಡಿದ್ದು ಚೇತರಿಕೆಯ ಒಟ್ಟು ಸಂಖ್ಯೆ ೪,೪೨,೧೦,೧೨೭ ಕ್ಕೆ ಏರಿಕೆಯಾಗಿದೆ. ಜೊತೆಗೆ ಸಕ್ರಿಯ ಪ್ರಕರಣಗಳ ಸಂಖ್ಯೆ ಶೇ.೦.೧೦ ಕ್ಕೆ ಹೆಚ್ಚಳವಾಗಿದೆ. ಸೋಂಕಿನಿಂದ ಇಲ್ಲಿಯ ತನಕ ೫,೩೧,೦೩೫ ಮಂದಿ ಸಾವನ್ನಪ್ಪಿದ್ದು ಸಾವಿನ ಪ್ರತಿಶತ ಪ್ರಮಾಣ ಶೇ.೧.೧೯ ರಷ್ಟು ಇದೆ. ಎಂದು ಹೇಳಿದೆ.
ದೇಶದಲ್ಲಿ ಹೊಸದಾಗಿ ಸೋಂಕಿನಿಂದ ಚೇತರಿಸಿಕೊಂಡವರ ಒಟ್ಟು ಪ್ರಮಾಣ ಶೇ.೯೮.೭೧ಕ್ಕೆ ಇಳಿಕೆಯಾಗಿದೆ ಎಂದು ಸಚಿವಾಲಯ ತಿಳಿಸಿದೆ.ಕೊರೊನಾ ಸೋಂಕಿನ ದಿನದ ಪಾಸಿಟಿವಿ ಪ್ರಮಾಣ ಶೇ. ೯ರಷ್ಟು ಇದ್ದು ದಿನದ ಪಾಸಿಟಿವಿಟಿ ಪ್ರಮಾಣ ಶೇ ೩.೮೭ರಷ್ಟು ಇದ್ದು ವಾರದ ಸರಾಸರಿ ಪ್ರಮಾಣ ,ಶೇ.೩.೯೩ ರಷ್ಟು ಇದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.