೧೨೭ ಕೋಟಿ ಲಸಿಕೆ ಪೂರೈಕೆ

ನವದೆಹಲಿ,ನ.೧೭- ದೇಶದಲ್ಲಿ ಕೊರೊನಾ ಸೋಂಕಿಗೆ ಲಸಿಕೆ ನೀಡಿಕೆ ಅಭಿಯಾನ ಆರಂಭವಾದಾಗಿನಿಂದ ಇಲ್ಲಿಯತನಕ ೧೨೭ ಕೋಟಿಗೂ ಅಧಿಕ ಡೋಸ್ ಲಸಿಕೆಯನ್ನು ಪೂರೈಕೆ ಮಾಡಿರುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ.
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಅವುಗಳ ಅಗತ್ಯಕ್ಕೆ ಅನುಗುಣವಾಗಿ ಇಲ್ಲಿಯತನಕ ೧೨೭,೨೩,೭೧,೯೬೦ ಡೋಸ್ ಲಸಿಕೆ ಪೂರೈಕೆ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
ಪೂರೈಕೆ ಮಾಡಿರುವ ಒಟ್ಟು ಲಸಿಕೆಯ ಪೈಕಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಬಳಿ ಇನ್ನೂ ಬಳಕೆಯಾಗದ ೨೦ ಕೋಟಿಗೂ ಹೆಚ್ಚು ಲಸಿಕೆ ಉಳಿದುಕೊಂಡಿದೆ ಎಂದು ತಿಳಿಸಿದೆ.
ಸತ್ಯ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಬಳಿ ಬಳಕೆಯಾಗದೆ ಉಳಿದಿರುವ ೨೦,೯೧,೯೬,೦೩೧ ಡೋಸ್ ಲಸಿಕೆಯನ್ನು ೧೮ ವರ್ಷ ದಾಟಿದ ಅರ್ಹ ನಾಗರಿಕರಿಗೆ ನೀಡುವಂತೆ ಸೂಚನೆ ನೀಡಲಾಗಿದೆ.
ನೆನ್ನೆ ಸಂಜೆಯತನಕ ದೇಶದಲ್ಲಿ ೧೧೩,೬೮,೭೯,೬೮೫ ಡೋಸ್ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
ನಿನ್ನೆ ಒಂದೇ ದಿನ ೬೭.೮೨ ಲಕ್ಷ ಡೋಸ್ ಲಸಿಕೆ ನೀಡಲಾಗಿದೆ . ಈ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ವರ್ಷಾಂತ್ಯದ ವೇಳೆಗೆ ಎಲ್ಲ ನಾಗರಿಕರಿಗೆ ಲಸಿಕೆ ನೀಡುವ ಉದ್ದೇಶ ಹೊಂದಲಾಗಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.
ದೇಶದಲ್ಲಿ ಇಲ್ಲಿಯತನಕ ೬೨,೭೦,೧೬,೩೩೬ ಮಂದಿಗೆ ಕೊರೊನಾ ಸೋಂಕು ಪತ್ತೆ ಪರೀಕ್ಷೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ತಿಳಿಸಿದೆ.