೧೫ಕೋಟಿ ವೆಚ್ಚದ ಕಲ್ಯಾಣ ಮಂಟಪ ನಿರ್ಮಾಣ

ರಾಯಚೂರು,ಡಿ.೦೮-
ಐದು ಎಕರೆ ಭೂಮಿಯಲ್ಲಿ ಒಂದುವರೇ ಎಕರೆಯಲ್ಲಿ ೧೫ ಕೋಟಿ ವೆಚ್ಚದಲ್ಲಿ ಬೃಹತ್ ಕಲ್ಯಾಣ ಮಂಟಪ ನಿರ್ಮಾಣಕ್ಕೆ ಶೀಘ್ರವಾಗಿ ಭೂಮಿಪೂಜೆ ಮಾಡಲಾಗುವುದು ಎಂದು ನಗರ ಶಾಸಕ ಡಾ. ಶಿವರಾಜ ಪಾಟೀಲ್ ಹೇಳಿದರು.
ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಸಭಾ ವತಿಯಿಂದ ಹಮ್ಮಿಕೊಂಡಿದ್ದ ೨೦೨೧ – ೨ನೇ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉನ್ನತ ಅಂಕಗಳಿಸಿದ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಈಗಾಗಲೇ ನಗರದಲ್ಲಿ ಸಿಎ ಮಂಜೂರು ಮಾಡಲಾಗಿದ್ದು, ಆ ಸೈಟಿನಲ್ಲಿ ವೀರಶೈವ ಲಿಂಗಾಯತ ಸಮಾಜದ ವಿದ್ಯಾರ್ಥಿಗಳಿಗೆ ೧ಕೋಟಿ ವೆಚ್ಚದಲ್ಲಿ ವಸತಿ ನಿಲಯ ನಿರ್ಮಾಣ ಹಂತದಲ್ಲಿದೆ,ಈಗಾಗಲೇ ೭೫ ಲಕ್ಷ ಬಿಡುಗಡೆ ಆಗಿದೆ, ಏಪ್ರಿಲ್ ಅಂತ್ಯದಲ್ಲಿ ಕಟ್ಟಡ ಪೂರ್ಣಗೊಳ್ಳುತ್ತದೆ ಎಂದು ತಿಳಿಸಿದರು.
ನಿಮ್ಮ ತಂದೆ-ತಾಯಿ ಕಷ್ಟಪಟ್ಟು ದುಡಿದು ನಿಮ್ಮನ ವಿದ್ಯಾವಂತರನ್ನಾಗಿ ಮಾಡಿದ್ದಾರೆ ನಿಮ್ಮ ಮೇಲೆ ಗುರುತರವಾದ ಜವಾಬ್ದಾರಿ ಇದೆ ಸಮಾಜವನ್ನು ಮುನ್ನಡಿಸುವಂತಹ ಜವಾಬ್ದಾರಿಯುತ್ತವಾದ ಕಾರ್ಯ ನಿಮ್ಮ ಮೇಲೆ ಇದೆ, ಇನ್ನೂ ಮುಂದಿನ ದಿನಗಳಲ್ಲಿ ಒಳ್ಳೆ ಒಳ್ಳೆ ಉದ್ಯೋಗ ಪಡೆದುಕೊಳ್ಳಿ ನಿರಂತರವಾಗಿ ಅಭ್ಯಾಸದ ಕಡೆಗೆ ಗಮನ ನೀಡಿ ಎಂದು ವಿದ್ಯಾರ್ಥಿಗಳಿಗೆ ಶಾಸಕರಾದ ಡಾ. ಶಿವರಾಜ್ ಪಾಟೀಲ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಪ್ರತಿಭೆ ಇದೆ ಅಂತವರನ್ನ ಗುರ್ತಿಸುವುದು, ಅದಕ್ಕಿಂತ ಕಡಿಮೆ ಇದ್ದವರಿಗೆ ಉತ್ತೇಜನ ನೀಡಲು ಪ್ರತಿಭಾ ಪುರಸ್ಕಾರ ಸಮಾರಂಭ ಎಲ್ಲಾ ಜಿಲ್ಲೆಗಳಲ್ಲಿ ಹಮ್ಮಿಕೊಳ್ಳಲಾಗಿದೆ ಅದೇ ರೀತಿ ಇಂದು ರಾಯಚೂರು ಜಿಲ್ಲೆಯಲ್ಲಿ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ವೀರಶೈವ ಲಿಂಗಾಯತ ಸಮಾಜ ಕೇಂದ್ರ ಸರ್ಕಾರದ ಒಬಿಸಿ ಪಟ್ಟಿಗೆ ಸೇರಿಸಬೇಕು, ಇದರಿಂದ ನೀಟ್ ಪರೀಕ್ಷೆ, ವೈದ್ಯಕೀಯ ವೃತ್ತಿಗೆ ಪ್ರವೇಶ ಪಡೆಯಲು ಅವಕಾಶ ಸಿಗುತ್ತದೆ, ಸಮಾಜದ ವತಿಯಿಂದ ಕೇಂದ್ರ ಸರ್ಕಾರಕ್ಕೆ ಒತ್ತಾಯ ಮಾಡಲಾಗುವುದು ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟೀಯ ಪ್ರಧಾನ ಕಾರ್ಯದರ್ಶಿಯಾದ ಎಚ್.ಎಂ. ರೇಣುಕಾ ಪ್ರಸನ್ನ ಹೇಳಿದರು.
ವೀರಶೈವ ಲಿಂಗಾಯತ ಸಮುದಾಯದ ವಿದ್ಯಾರ್ಥಿಗಳು ಉನ್ನತ ಮಟ್ಟದ ಶಿಕ್ಷಣಪಡೆದು, ಉನ್ನತ ವೃತ್ತಿಪಡೆಯಬೇಕು, ಸಮಾಜದಲ್ಲಿ ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದ ಜನರಿಗೆ ಸಹಕಾರಮಾಡಿ, ಸಮಾಜದ ಅಭಿವೃದ್ಧಿಗೆ ಕೈಜೋಡಿಸಿ ಬೇಕು ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷರಾದ ಚಂದ್ರಶೇಖರ ಪಾಟೀಲ ಮಿರ್ಜಾಪುರ ಹೇಳಿದರು.
ಅವರು ಇಂದು ಬೆಳಿಗ್ಗೆ ವೀರಶೈವ ಕಲ್ಯಾಣ ಮಂಟಪದಲ್ಲಿ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭದ ಸಮಯದಲ್ಲಿ ಪ್ರಾಸ್ತಾವಿಕ ನುಡಿಯಲ್ಲಿ ಸಮೂದಾಯದ ಸಮಾಜಮುಖಿಯ ಕಾರ್ಯಕ್ಕೆ ಮುಂದೆ ಬರಬೇಕು, ಸಮಾಜದ ವತಿಯಿಂದ ಶಿಕ್ಷಣ ಸಂಸ್ಥೆಗಳು, ವಸತಿ ನಿಲಯ ಹಲವು ಕಾರ್ಯಗಳನ್ನು ಮಾಡಲು ಮುಂದಾಗಿದೆ, ಇದಕ್ಕೆ ನಿವೇಶನ ಒದಗಿಸಬೇಕು ಎಂದು ಶಾಸಕರಿಗೆ ಮನವಿ ಮಾಡಿದರು.
ಸಮಾರಂಭದ ದಿವ್ಯ ಸಾನಿಧ್ಯವನ್ನು ಶ್ರೀ ಶಾಂತಮಲ್ಲ ಶಿವಾಚಾರ್ಯ ಮಹಾಸ್ವಾಮಿಗಳು, ಶ್ರೀ ಅಭಿನವ ರಾಚೋಟಿವೀರ ಶಿವಾಚಾರ್ಯ ಮಹಾಸ್ವಾಮಿಗಳು ವಹಿಸಿಕೊಂಡಿದ್ದರು, ವಿಶೇಷ ಆಹ್ವಾನಿತರಾಗಿ ಮಹಾಸಭಾದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ನಟರಾಜ ಸಗರನಹಳ್ಳಿ, ಎಂ ವೀರನ ಗೌಡ, ರಾಚನಗೌಡ ಕೋಳೂರು, ಸುಲೋಚನಾ ಅಲ್ಕೂರು,ರೇಖಾ ಕೇಶವರೆಡ್ಡಿ, ಬಿ ಎಸ್ ಪಾಟೀಲ್, ರಾಮನಗೌಡ ಏಗನೂರು,
ವೀರಶೈವ ಲಿಂಗಾಯತ ಮಹಾಸಭಾ ಯುವ ಘಟಕದ ಜಿಲ್ಲಾಧ್ಯಕ್ಷರಾದ ಶಿವಶರಣ ಸಾಹುಕಾರ ಅರಕೇರಿ, ಮಾನ್ವಿ ಯುವ ಘಟಕದ ಅಧ್ಯಕ್ಷರಾದ ಚಂದ್ರಶೇಖರ್ ಪಾಟೀಲ್ ಜಾನೇಕಲ್, ಬಸನಗೌಡ ಅಲ್ದಾಳ್,ತಾಲೂಕು ವೀರಶೈವ ಅಧ್ಯಕ್ಷ,ವೀರಪ್ಪಗೌಡ ಚಿಕಲ್ಪರ್ವಿ,ಶ್ರೀಕಾಂತ ಗೂಳಿ,ಗುಂಡಪ್ಪ ಗೌಡ ಕಲ್ಲೂರು, ಶಿವಣ್ಣ ಹಳ್ಳಿಹೊಸೂರು, ಸೇರಿದಂತೆ ವಿವಿಧ ತಾಲೂಕು ಘಟಕದ ಅಧ್ಯಕ್ಷರು,ಪದಾಧಿಕಾರಿಗಳು, ಸಮಾಜದ ಮುಖಂಡರು, ವಿಧ್ಯಾರ್ಥಿಗಳು, ಪಾಲಕರು ಸೇರಿದಂತೆ ಅನೇಕರು ಭಾಗವಹಿಸಿದ್ದರು.