೧೭೬ ವಿದ್ಯಾರ್ಥಿಗಳಿಗೆ ಟ್ಯಾಬ್, ಲ್ಯಾಪ್‌ಟಾಪ್ ವಿತರಣೆ

ಸುಳ್ಯ, ನ.೧೧- ಶ್ರೀ ಕ್ಷೇ. ಧ. ಗ್ರಾ. ಯೋಜನೆ
ಬಿಸಿ ಟ್ರಸ್ಟ್ ಸುಳ್ಯ ತಾಲೂಕು ಇದರ ಆಯೋಜನೆಯಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಕನ್ನಡ
ಮಾಧ್ಯಮದಲ್ಲಿ ಅಂತರ್ಜಾಲ ಶಿಕ್ಷಣ ವ್ಯವಸ್ಥೆ ಜ್ಞಾನತಾಣ ಕಾರ್ಯಕ್ರಮವು ಸುಳ್ಯದ ಶ್ರೀ ಕ್ಷೇ.ಧ.ಗ್ರಾಮಾಭಿವೃಧ್ದಿ ಯೋಜನಾ ಕಛೇರಿ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳು ಅಂತರ್ಜಾಲ ಶಿಕ್ಷಣ ವ್ಯವಸ್ಥೆಯನ್ನು ದುರುಪಯೋಗ ಪಡಿಸಿಕೊಳ್ಳದೇ ಒಳ್ಳೆಯ ವಿಚಾರಗಳಿಗಾಗಿ ಬಳಕೆ ಮಾಡಿಕೊಳ್ಳಬೇಕು. ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯು ಸರಕಾರದೊಂದಿಗೆ ಕೈಜೋಡಿಸಿ ಗ್ರಾಮಗಳ ಅಭಿವೃದ್ದಿಗೆ ಪಣತೊಟ್ಟಿದೆ. ಇಂತದೇ ಕಾರ್ಯವನ್ನು ಕನ್ನಡ ಮಾಧ್ಯಮಿಕ ಶಾಲೆಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ನೆರವಾಗುವ ಮೂಲಕ ಉತ್ತಮ ಹೆಜ್ಜೆ ಇಟ್ಟಿದೆ ಎಂದರು. ಅಧ್ಯಕ್ಷತೆಯನ್ನು ಜನಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷ ಎನ್.ಎ.ರಾಮಚಂದ್ರ ವಹಿಸಿದ್ದರು. ಶಿಕ್ಷಣ ಸಂಯೋಜಕರಾದ ಚಂದ್ರಶೇಖರ, ಉಡುಪಿಯ ಶ್ರೀ.ಕ್ಷೇ.ಧ.ಗ್ರಾ. ಯೋಜನಾ ಕಛೇರಿಯ ಪ್ರಾದೇಶಿಕ ನಿರ್ದೇಶಕರಾದ ವಸಂತ ಸಾಲ್ಯಾನ್, ಸುಳ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೃ? ಬೆಟ್ಟ, ಸುಳ್ಯ ಕೇಂದ್ರ ಒಕ್ಕೂಟದ ಅಧ್ಯಕ್ಷ ಯತೀಶ್ ರೈ ದುಗಲಡ್ಕ, ಸುಳ್ಯ ಶ್ರೀ.ಕ್ಷೇ.ಧ.ಗ್ರಾ.ಯೋಜನೆಯ ಯೋಜನಾಧಿಕಾರಿ ಸಂತೋ? ಕುಮಾರ್ ರೈ, ವಸಂತ ಏನೆಕಲ್ಲು ಉಪಸ್ಥಿತರಿದ್ದರು. ಸುಧೀರ್ ನೆಕ್ರಾಜೆ ನಿರೂಪಿಸಿದರು. ಕಾರ್ಯಕ್ರಮದಲ್ಲಿ ತಾಲೂಕಿನ ೧೦೩ ವಿದ್ಯಾರ್ಥಿಗಳಿಗೆ ಟ್ಯಾಬ್ ಮತ್ತು ೭೩ ವಿದ್ಯಾರ್ಥಿಗಳಿಗೆ ಲ್ಯಾಪ್‌ಟ್ಯಾಪ್‌ನ್ನು ವಿತರಣೆ ಮಾಡಲಾಯಿತು.