೧೯ ಸಂಸದರ ಅಮಾನತು ವಿಪಕ್ಷಗಳ ಪ್ರತಿಭಟನೆ

ನವದೆಹಲಿ,ಜು.೨೭- ಸಂಸತ್ತಿನ ಮುಂಗಾರು ಅಧಿವೇಶನ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಜಟಾಪಟಿಗೆ ಕಾರಣವಾಗಿದೆ. ಕಲಾಪಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ೨೩ ಸಂಸದರನ್ನು ಅಮಾನತುಗೊಳಿಸಿರುವುದನ್ನು ಖಂಡಿಸಿ ಪ್ರತಿಪಕ್ಷಗಳು ಸಂಸತ್ತಿನ ಮಹಾತ್ಮಗಾಂಧಿ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸಿತು.
ಈ ಮಧ್ಯೆ ಅಮಾನತುಗೊಳಿಸಿರುವ ಕ್ರಮದ ಗ್ಗೆ ಮುಂದಿನ ಹೋರಾಟದ ರೂಪು-ರೇಷೆ ಬಗ್ಗೆ ಚರ್ಚೆ ನಡೆಸಲು ರಾಜ್ಯಸಭೆಯಲ್ಲಿನ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಸಭೆ ನಡೆಸಿದರು.
ನಿನ್ನೆ ರಾಜ್ಯಸಭೆಯಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಹಾಗೂ ಜಿಎಸ್‌ಟಿ ತೆರಿಗೆ ವಿರೋಧಿಸಿ ಪ್ರತಿಪಕ್ಷಗಳು ಸದನದ ಬಾವಿಗಿಳಿದು ಈ ವಿಷಂiದ ಬಗ್ಗೆ ಅವಕಾಶ ನೀಡಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಿ ಕಲಾಪಕ್ಕೆ ಅಡ್ಡಿಪಡಿಸಿದರು.
ಉಪಸಭಾಪತಿಗಳು ಪದೇ ಪದೇ ಮನವಿ ಮಾಡಿದರೂ ಪ್ರತಿಪಕ್ಷದ ಸದಸ್ಯರು ಸ್ಪಂದಿಸದ ಕಾರಣ ೧೯ ಸದಸ್ಯರ ವಿರುದ್ಧ ಅಮಾನತ್ತಿನ ಅಸ್ತ್ರ ಪ್ರಯೋಗಿಸಲಾಗಿತ್ತು. ಇದು ಪ್ರತಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದೆ.
ಈ ಕ್ರಮ ಪ್ರಶ್ನಿಸಿ ಕಾಂಗ್ರೆಸ್ ನೇತೃತ್ವದಲ್ಲಿ ಮಹಾತ್ಮಗಾಂಧಿ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸಿ ಅಮಾನತ್ತಿನ ಕ್ರಮದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಬೆಲೆ ಏರಿಕೆ ಬಗ್ಗೆ ಚರ್ಚೆ ನಡೆಸಕು ಸಂಸತ್ತಿನಲ್ಲಿ ಅವಕಾಶ ನೀಡುತ್ತಿಲ್ಲ. ಈ ಬಗ್ಗೆ ಸದನದಲ್ಲಿ ಪ್ರತಿಭಟನೆ ನಡೆಸಿದ ಸದಸ್ಯರನ್ನು ಅಮಾನತು ಮಾಡಲಾಗಿದೆ. ಕೂಡಲೇ ಈ ಕ್ರಮ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು.
ಸಂಸತ್ತಿನ ಮುಂಗಾರು ಅಧಿವೇಶನ ಪ್ರಾರಂಭವಾದಾಗಿನಿಂದಲೂ ಪ್ರತಿಪಕ್ಷಗಳು ಎರಡೂ ಸದನದಲ್ಲಿ ಕಲಾಪಕ್ಕೆ ಅಡ್ಡಿಪಡಿಸುತ್ತಿದೆ. ಇದುವರೆಗೂ ಯಾವುದೇ ಚರ್ಚೆಗಳು ನಡೆದಿಲ್ಲ. ಚರ್ಚೆಗೆ ಅವಕಾಶ ನೀಡುವುದಾಗಿ ಭರವಸೆ ನೀಡಿದ್ದರೂ ಪ್ರತಿಪಕ್ಷಗಳ ವರ್ತನೆ ಬಗ್ಗೆ ಸರ್ಕಾರ ಕಿಡಿಕಾರಿದೆ.