
ಸಿರವಾರ,ಮಾ.೧೩- ಮುಂಬರುವ ೨೦೨೩ ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ಖಚಿತ ಆಗ ಮಹಿಳೆಯರಿಗೆ ಗೃಹಲಕ್ಷ್ಮೀ, ಉಚಿತ ವಿದ್ಯುತ್ ಸೇರಿ ಹಲವು ಯೋಜನೆಯನ್ನು ರೂಪಿಸಿದ್ದು, ಇವುಗಳನ್ನು ಕಾರ್ಯಕರ್ತರು ಮನೆ ಮನೆಗೆ ತೆರಳಿ ಗ್ಯಾರೆಂಟಿ ಕಾರ್ಡ್ ತಲುಪಿಸಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಕಾಂಗ್ರೆಸ್ ಯುವ ಮುಖಂಡ ಹಾಗೂ ಮಾನ್ವಿ ವಿಧಾನಸಭಾ ಕ್ಷೇತ್ರದ ಆಕಾಂಕ್ಷಿ ಶರಣಯ್ಯನಾಯಕ ಗುಡದಿನ್ನಿ ಹೇಳಿದರು.
ಮಾನ್ವಿ ವಿಧಾನಸಭಾ ಕ್ಷೇತ್ರದ ಹಾಗೂ ತಾಲೂಕಿನ ಕೆ. ಗುಡದಿನ್ನಿ ಗ್ರಾಮದಲ್ಲಿ ಇಂದು ಬೆಳಗ್ಗೆ ಕಾಂಗ್ರೆಸ್ ಗ್ಯಾರೆಂಟಿ ಕಾರ್ಡ್‌ನ್ನು ವಿತರಣೆ ಮಾಡಿ ಮಾತನಾಡಿದ ಅವರು, ನೂರಾರು ವರ್ಷಗಳ ಇತಿಹಾಸವಿರುವ ಕಾಂಗ್ರೆಸ್ ಪಕ್ಷ ದೇಶದ, ರಾಜ್ಯದ ಅಭಿವೃದ್ಧಿಗೆ ಬುನಾದಿ ಹಾಕಿದೆ.
ರಾಜ್ಯದ ಬಿಜೆಪಿ ಸರ್ಕಾರದ ಭ್ರಷ್ಟಾಚಾರ, ರೈತರಿಗೆ, ಮಹಿಳೆಯರಿಗೆ ಯಾವುದೇ ಯೋಜನೆಯನ್ನು ಜಾರಿಗೆ ತಂದಿಲ್ಲ. ಒಂದೇ ಒಂದು ಆಶ್ರಯ ಮನೆಗಳಿಗೆ ಅನುದಾನ ನೀಡಿಲ್ಲ ಇಂತಹ ವಿಷಯಗಳನ್ನು ಮತದಾರರಿಗೆ ಮನದಟ್ಟು ಮಾಡಿ, ಮುಂಬರುವ ವಿಧಾನ ಸಭೆಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮತ ನೀಡಲು ಮನವಿಮಾಡಿ, ಕಾರ್ಯಕರ್ತರು ಹಗಲು ರಾತ್ರಿ ಕೆಲಸಮಾಡಿ, ಪಕ್ಷವನ್ನು ಅಧಿಕಾರಕ್ಕೆ ತರಬೇಕು. ನುಡಿದಂತೆ ನಡೆದ ಪಕ್ಷವೆಂದರೆ ಅದು ಕಾಂಗ್ರೆಸ್ ಮಾತ್ರ.
ಹಿಂದೆ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರದಲ್ಲಿ ೯೯ % ಭರವಸೆ ಈಡೇರಿಸಿದರು. ೨೦೨೩ ಕ್ಕೆ ಮತ್ತೆ ಅಧಿಕಾರಕ್ಕೆ ಬರುತ್ತದೆ. ಪ್ರತಿ ವ್ಯಕ್ತಿಗೆ ೧೦ ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡುತ್ತೇವೆ. ಪ್ರಣಾಳಿಕೆಯ ಗ್ಯಾರೆಂಟಿ ಕಾರ್ಡ್‌ನ ಮೇಲೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಹಿ ಇದೆ. ಸರ್ಕಾರ ಬರುವುದು ಖಚಿತ, ಯೋಜನೆ ಜಾರಿಗೆ ತರುವುದು ಖಚಿತ ಎಂದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಬಜ್ಜಣ್ಣ , ವೈ. ರಮೇಶ್ ನಾಯಕ್, ನಾಗಪ್ಪ ಯಾದವ್, ಬೂದೆಪ್ಪ ನಾಯಕ್, ಅಮರೇಶ ನಾಯಕ್, ವೀರಯ್ಯಸ್ವಾಮಿ, ಗ್ರಾ.ಪಂ ಮಾಜಿ ಸದಸ್ಯ ಬಸವರಾಜ ನಾಯಕ, ಪಕೀರಪ್ಪ ಯಾದವ್, ಗುಂಡಪ್ಪ ಯಾದವ್ ಮತ್ತು ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು ಭಾಗವಹಿಸಿದ್ದರು.