೨೧ ಸಾವಿರ ಮಂದಿಗೆ ಸೋಂಕು

ನವದೆಹಲಿ,ಜು.೨೧- ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಮತ್ತು ಸಾವಿನ ಸಂಖ್ಯೆ ರಾಕೆಟ್ ವೇಗದಲ್ಲಿ ಹೆಚ್ಚಾಗುತ್ತಿರುವುದು ಆತಂಕ ಮೂಡಿಸಿದೆ.
ದೇಶದಲ್ಲಿ ಹೊಸದಾಗಿ ೨೧,೫೬೬ ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು ೪೫ ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದೇ ಅವಧಿಯಲ್ಲಿ ಸೋಂಕಿನಿಂದ ೧೮,೨೯೪ ಮಂದಿಚೇತರಿಸಿಕೊಂಡು ಬಿಡುಗಡೆಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
ಹೊಸದಾಗಿ ಸೋಂಕು ಏರಿಕೆ ಹಿನ್ನೆಲೆಯಲ್ಲಿ ದಿನದ ಪಾಸಿಟಿವಿಟಿ ಪ್ರಮಾಣ ಶೇ.೪.೨೫ಕ್ಕೆ ಹೆಚ್ಚಳವಾಗಿದ್ದು ಒಟ್ಟಾರೆ ಸಕ್ರಿಯ ಪ್ರಕರಣಗಳ ಸಂಖ್ಯೆ ೧,೪೮,೮೮೧ಕ್ಕೆ ಹೆಚ್ಚಳವಾಗಿದೆ.
ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಒಟ್ಟು ಸೋಂಕಿನ ಸಂಖ್ಯೆ ೪.೩೭ ಕೋಟಿ ದಾಟಿದ್ದು ಇಲ್ಲಿಯವರೆಗೆ ಚೇತರಿಸಿಕೊಂಡು ಬಿಡುಗಡೆಯದವರ ಸಂಖ್ಯೆ ೪,೩೧,೫೦,೪೩೪ ಮಂದಿ ಸೋಂಕಿತರು ಬಿಡುಗಡೆಯಾಗಿದ್ದಾರೆ. ಜೊತೆಗೆ ಇದೇ ಅವಧಿಯಲ್ಲಿ ೫,೨೫,೮೭೦ ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ದೇಶದಲ್ಲಿ ನಿನ್ನೆ ೨೯,೧೨,೮೫೫ ಡೋಸ್ ಲಸಿಕೆ ನೀಡಲಾಗಿದ್ದು ಇಲ್ಲಿಯ ತನಕ ೨೦೦,೯೧,೯೧,೯೬೯ ಡೋಸ್ ಲಸಿಕೆ ನೀಡಲಾಗಿದೆ. ಒಟ್ಟು ಪಾಸಿಟಿವಿ ಪ್ರಮಾಣ ಶೇ.೦.೩೩ಕ್ಕೆ ಹೆಚ್ಚಳವಾಗಿದೆ.
ಸೋಂಕು ನಿತ್ಯ ಏರಿಕೆ ಹಿನ್ನೆಲೆಯಲ್ಲಿ ಚೇತರಿಕೆ ಪ್ರಮಾಣ ಶೇ,೯೮.೪೭ಕ್ಕೆ ಕುಸಿತ ಕಂಡಿದೆ. ದಿನದ ಪಾಸಿಟಿವಿ ಪ್ರಮಾಣ ಶೇ.೪.೨೫ ರಷ್ಟು ಇದ್ದು ವಾರದ ಸರಾಸರಿ ಪ್ರಮಾಣ ಶೇ.೪.೬೪ರಷ್ಟು ಇದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.,