೨೪ ತಾಸುಗಳಲ್ಲಿ ೨೦ಸಾವಿರ ದಾಟಿದ ಸೋಂಕು

ನವದೆಹಲಿ,ಜು.೨೯- ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಸಂಖ್ಯೆ ಏರುಮುಖದಲ್ಲಿದ್ದು ಇಂದೂ ಕೂಡ ೨೦ ಸಾವಿರ ಗಡಿ ದಾಟಿದೆ.

ಕಳೆದ ೨೪ ಗಂಟೆಗಳ ಅವಧಿಯಲ್ಲಿ ಹೊಸದಾಗಿ ೨೦,೪೦೯ ಮಂದಿಯಲ್ಲಿ ಸೋಂಕು ದಾಖಲಾಗಿದೆ.ನಿನ್ನೆಗಿಂತ ಇಂದು ಸಕ್ರಿಯ ಪ್ರಕರಣಗಳ ಸಂಖ್ಯೆ ೨,೫೦೦ಕ್ಕೂ ಹೆಚ್ಚು ಸಂಖ್ಯೆ ಕಡಿಮೆಯಾಗಿದೆ. ಹೀಗಾಗಿ ಸಕ್ರಿಯ ಪ್ರಕರಣಗಳ ಸಂಖ್ಯೆ ೧,೪೩,೯೮೮ ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ಹೊಸದಾಗಿ ಕಾಣಿಸಿಕೊಂಡಿರುವ ಸೋಂಕು ಸೇರಿದಂತೆ ಇಲ್ಲಿಯ ತನಕ ಒಟ್ಟು ಸೋಂಕಿತರ ಸಂಖ್ಯೆ ೪.೩೭ ಕೋಟಿಗೆ ಏರಿಕೆಯಾಗಿದೆ. ಅಲ್ಲದೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ೪,೩೩,೦೯,೪೮೪ಕ್ಕೆ ಹೆಚ್ಚಳವಾಗಿದೆ. ಸೋಂಕಿನಿಂದ ಇಲ್ಲಿಯ ತನಕ ಮೃತಪಟ್ಟವರ ಸಂಖ್ಯೆ ೫,೨೬,೨೫೮ಕ್ಕೆ ಹೆಚ್ಚಳವಾಗಿದೆ ಎಂದು ತಿಳಿಸಲಾಗಿದೆ.

ಕಳೆದ ೨೪ ಗಂಟೆಗಳಲ್ಲಿ ೩೮,೬೩,೬೯೦ ಡೋಸ್ ಲಸಿಕೆ ನೀಡಲಾಗಿದ್ದು ಇಲ್ಲಿಯ ತನಕ ೨೦೩,೬೦,೪೬,೩೦೭ ಡೋಸ್ ಲಸಿಕೆ ನೀಡಲಾಗಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಇಲ್ಲಿಯ ತನಕ ೮೭,೪೪,೦೬,೭೯೮ ಮಂದಿಗೆ ಕೊರೊನಾ ಸೋಂಕು ಪತ್ತೆ ಪರೀಕ್ಷೆ ಮಾಡಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ತಿಳಿಸಿದೆ.

ಸೋಂಕು ಸಂಖ್ಯೆ ಹೆಚ್ಚಳ ಹಿನ್ನೆಲೆಯಲ್ಲಿ ಒಟ್ಟು ಸೋಂಕಿನ ಚೇತರಿಕೆ ಪ್ರಮಾಣ ಶೇ.೯೮.೪೮ ಕ್ಕೆ ಕುಸಿತ ಕಂಡಿದೆ ಎಂದು ಆರೋಗ್ಯ ಸಚಿವಾಲಯ ತನ್ನ ಅಧಿಕೃತ ಮಾಹಿತಿಯಲ್ಲಿ ಈ ವಿಷಯ ತಿಳಿಸಿದೆ.

ಒಟ್ಟು ಸೋಂಕಿನ ಪಾಸಿಟಿವಿಟಿ ಪ್ರಮಾಣ ಶೇ.೦.೩೩ ರಷ್ಟು ಇದೆ.ಈ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ ಎಂದು ಸಚಿವಾಲಯ ತಿಳಿಸಿದೆ.