ನವದೆಹಲಿ,ಸೆ.೨೪- ದೇಶದ ಹಲವೆಡೆ ಮತ್ತೆ ವರುಣನ ಅರ್ಭಟಿಸಿದ್ದಾನೆ. ಕೆಲವು ದಿನಗಳಿಂದ ಹಲವು ರಾಜ್ಯಗಳಲ್ಲಿ ಮಳೆ ಬೀಳುತ್ತಿದ್ದು ಕರ್ನಾಟಕ ಸೇರಿದಂತೆ ೨೪ ರಾಜ್ಯಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಹವಾಮಾನ ಇಲಾಖೆ ಮಾಹಿತಿ ಆಧರಿಸಿ ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.ಇಂದು ಪೂರ್ವ ಮಧ್ಯಪ್ರದೇಶ, ಛತ್ತೀಸ್‌ಗಢ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಉಪ-ಹಿಮಾಲಯ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ, ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯದ ಪ್ರತ್ಯೇಕ ಸ್ಥಳಗಳಲ್ಲಿ ಹವಾಮಾನ ಇಲಾಖೆ ಭಾರೀ ಮಳೆಯ ಮುನ್ಸೂಚನೆ ನೀಡಿದೆ.ಈ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.ಕೇರಳ ಮತ್ತು ಮಾಹೆಯಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಮಿಂಚು ಮತ್ತು ಬಲವಾದ ಗುಡುಗು ಸಹಿತ ಮಳೆಯಾಗಬಹುದು.(ಗಾಳಿಯ ವೇಗ ಗಂಟೆಗೆ ೩೦-೪೦ ಕಿಮೀ) ಇರಲಿದೆ.ದೇಶದ ಹಿಮಾಚಲ ಪ್ರದೇಶ, ಉತ್ತರಾಖಂಡ, ಪಂಜಾಬ್, ಹರಿಯಾಣ-ಚಂಡೀಗಢ-ದೆಹಲಿ, ಉತ್ತರ ಪ್ರದೇಶ, ಪೂರ್ವ ರಾಜಸ್ಥಾನ, ಮಧ್ಯಪ್ರದೇಶ, ವಿದರ್ಭ, ಛತ್ತೀಸ್‌ಗಢ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ, ಬಿಹಾರ, ಜಾರ್ಖಂಡ್, ಒಡಿಶಾ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್ ಮಳೆಯಾಗಲಿದೆ.
ಜೊತೆಗೆ ಮಣಿಪುರ, ಮಿಜೋರಾಂ, ತ್ರಿಪುರಾ, ಮಧ್ಯ ಮಹಾರಾಷ್ಟ್ರ, ಮರಾಠವಾಡ, ಗುಜರಾತ್ ಪ್ರದೇಶ, ಕರಾವಳಿ ಆಂಧ್ರಪ್ರದೇಶ, ಯಾನಂ, ತೆಲಂಗಾಣ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನ ಪ್ರತ್ಯೇಕ ಸ್ಥಳಗಳಲ್ಲಿ ಮಳೆ ಮತ್ತು ಮಿಂಚು ಬರುವ ಸಾಧ್ಯತೆ ಇದೆ ದೇಶಾದ್ಯಂತ ಮತ್ತೆ ಮಳೆ ಮುಂದುವರಿದಿದ್ದು, ಅನೇಕ ರಾಜ್ಯಗಳಲ್ಲಿ ಕಳೆದ ಕೆಲ ದಿನಗಳಿಂದ ಮಳೆಯಾಗುತ್ತಿದೆ. ಕರ್ನಾಟಕ ಸೇರಿದಂತೆ ೨೪ ರಾಜ್ಯಗಳಲ್ಲಿ ಮಳೆಯಾಗಲಿದ್ದು, ಕೆಲವೆಡೆ ರೆಡ್ ಅಲರ್ಟ್ ಘೋಷಿಸಲಾಗಿದೆ.ನೈಋತ್ಯ ಮಾನ್ಸೂನ್ ದೇಶಕ್ಕೆ ಮರಳಿದೆ ಎಂದು ಐಎಂಡಿ ಹೇಳಿದ್ದು, ಒಂದು ಚಂಡಮಾರುತದ ಪರಿಚಲನೆಯು ನೈಋತ್ಯ ಬಿಹಾರದ ಕೆಳ ಟ್ರೋಪೋಸ್ಪಿಯರ್ ಮಟ್ಟದಲ್ಲಿ ನೆಲೆಗೊಂಡಿದೆ. ಸೆಪ್ಟೆಂಬರ್ ೨೯ ರಂದು ಉತ್ತರ ಅಂಡಮಾನ್ ಸಮುದ್ರ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಸೈಕ್ಲೋನಿಕ್ ಪರಿಚಲನೆ ಉಂಟಾಗುವ ಸಾಧ್ಯತೆಯಿದೆ.