೨೫೦ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮೇಲ್ದರ್ಜೆಗೆ: ಸುಧಾಕರ್‌

ಮಂಗಳೂರು, ಎ.೧- ರಾಜ್ಯದ 250 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೆ ಏರಿಸಲಾಗುವುದು ಎಂದು ರಾಜ್ಯ ಆರೋಗ್ಯ ಸಚಿವ ಡಾ. ಸುಧಾಕರ್ ತಿಳಿಸಿದ್ದಾರೆ.

ಅವರು ಬಂಟ್ವಾಳದ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರನ್ನುದ್ದೇಶಿಸಿ ಮಾತನಾಡುತ್ತಿದ್ದರು. ಬಂಟ್ವಾಳ ತಾಲೂಕಿನ ಪೂಂಜಾಲಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಉನ್ನತ ಮಟ್ಟದ ಆರೋಗ್ಯ ಕೇಂದ್ರವಾಗಿ ಅಭಿವೃದ್ಧಿ ಪಡಿಸಲಾಗುವುದು. ಸುಮಾರು 6 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುವುದು. ನೂತನ ಕಟ್ಟಡ ಹಾಗೂ ಸುಸಜ್ಜಿತ ವಸತಿ ಗೃಹಗಳನ್ನು ನಿರ್ಮಿಸಲಾಗುವುದು ಎಂದು ಡಾ.ಸುಧಾಕರ್ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಪಸ್ಥಿತರಿದ್ದರು.