೩ನೇ ಬಾರಿ ಅಂಬಾನಿಗೆ ಕೊಲೆ ಬೆದರಿಕೆ,

೪೦೦ ಕೋಟಿ ಬೇಡಿಕೆ

ಮುಂಬೈ,ಅ.೩೧: ದೇಶದ ಅಗ್ರಗಣ್ಯ ಉದ್ಯಮ ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ಅವರಿಗೆ ೩ನೇ ಬಾರಿಗೆ ಕೊಲೆ ಬೆದರಿಕೆ ಬಂದಿದೆ. ಇಮೇಲ್‌ನಲ್ಲಿ ಮತ್ತೊಂದು ಬೆದರಿಕೆ ಪತ್ರ ಬಂದಿದ್ದು, ಬೇಡಿಕೆ ಮೊತ್ತವನ್ನು ೨೦೦ ಕೋಟಿ ರೂ.ನಿಂದ ೪೦೦ ಕೋಟಿ ರೂ.ಗಳಿಗೆ ಹೆಚ್ಚಿಸಲಾಗಿದೆ.
ಅ. ೨೭ ರಂದು ೨೦೦ ಕೋಟಿ ರೂ.ಗಳಿಗೆ ಬೇಡಿಕೆಯಿಟ್ಟು ಬೆದರಿಕೆ ಇಮೇಲ್ ಪತ್ರ ಕಳುಹಿಸಿದ್ದ ಅದೇ ಇಮೇಲ್‌ನಿಂದ ಮತ್ತೊಂದು ಬೆದರಿಕೆ ಪತ್ರ ಬಂದಿರುವುದು ಭೀತಿಗೆ ಕಾರಣವಾಗಿದೆ. ಈ ಬಾರಿ ಬೇಡಿಕೆ ಮೊತ್ತವನ್ನು ೪೦೦ ಕೋಟಿಗೆ ಹೆಚ್ಚಿಸಲಾಗಿದೆ. ಫೇಸ್‌ಬುಕ್ ಗೆಳೆಯನಿಗಾಗಿ ಪಾಕ್‌ಗೆ ತೆರಳಿದ್ದಾಕೆಗೆ ಈಗ ಮಕ್ಕಳನ್ನು ನೋಡುವ ಬಯಕೆ!
ನಿಮಗೆ ಎಷ್ಟೇ ಉತ್ತಮ ಭದ್ರತೆ ಇದ್ದರೂ, ನಮ್ಮ ಒಬ್ಬನೇ ಒಬ್ಬ ಸ್ನೈಪರ್ ನಿಮ್ಮನ್ನು ಕೊಲ್ಲುತ್ತಾನೆ. ಈ ಬಾರಿ ನಮ್ಮಮ್ಮ ಪತ್ತೆ ಮಾಡುವುದಕ್ಕಾಗಲಿ ಅಥವಾ ಬಂಧಿಸುವುದಕ್ಕಾಗಲಿ ಸಾಧ್ಯವಿಲ್ಲ ಎಂದೂ ಇಮೇಲ್‌ನಲ್ಲಿ ಅಪರಿಚಿತ ವ್ಯಕ್ತಿ ಎಚ್ಚರಿಕೆ ನೀಡಿದ್ದಾನೆ. ೩ನೇ ಬಾರಿಗೆ ಕೊಲೆ ಬೆದರಿಕೆ ಬಂದಿರುವ ಹಿನ್ನೆಲೆಯಲ್ಲಿ ಮುಂಬೈ ಪೊಲೀಸರು ದಕ್ಷಿಣ ಮುಂಬೈನಲ್ಲಿರುವ ಅಂಬಾನಿ ನಿವಾಸಕ್ಕೆ ವ್ಯಾಪಕ ಭದ್ರತೆ ಒದಗಿಸಲಾಗಿದೆ.
ತಿಂಗಳ ಅಕ್ಟೋಬರ್ ೨೭ ರಂದು ಮೊದಲ ಇಮೇಲ್ ಬೆದರಿಕೆ ಪತ್ರ ಬಂದಿತ್ತು. ಅದರಲ್ಲಿ ೨೦ ಕೋಟಿ ರೂ.ಗಳನ್ನು ತಪ್ಪದೇ ಕೊಡಬೇಕು. ನಮ್ಮ ಬಳಿ ಶಾರ್ಪ್ ಶೂಟರ್‌ಗಳಿದ್ದು, ಹಣ ನೀಡುವಲ್ಲಿ ವಿಫಲರಾದರೆ ಗುಂಡು ಹಾರಿಸಲಾಗುವುದು ಎಂದು ಬೆದರಿಕೆ ಹಾಕಲಾಗಿತ್ತು. ಅಕ್ಟೋಬರ್ ೨೮ ರಂದು ಅದೇ ಇಮೇಲ್‌ನಿಂದ ಅಪರಿಚಿತ ವ್ಯಕ್ತಿಯೊಬ್ಬ ಮತ್ತೊಂದು ಬೆದರಿಕೆ ಪತ್ರ ಕಳುಹಿಸಿದ್ದ. ಹಿಂದಿನ ಇ-ಮೇಲ್‌ಗೆ ಪ್ರತಿಕ್ರಿಯೆ ನೀಡದ ಕಾರಣ ಹಣದ ಬೇಡಿಕೆಯನ್ನು ೨೦೦ ಕೋಟಿ ರೂ.ಗೆ ಹೆಚ್ಚಿಸಿರುವುದಾಗಿ ಎಚ್ಚರಿಕೆ ನೀಡಿದ್ದ.
ಬೆದರಿಕೆ ಸಂಬಂಧ ಮುಕೇಶ್ ಅಂಬಾನಿ ಅವರ ಅವರ ಭದ್ರತಾ ಸಿಬ್ಬಂದಿ ದೂರು ದಾಖಲಿಸಿದ್ದರು. ದೂರಿನ ಆಧಾರದ ಮೇಲೆ ಮುಂಬೈನ ಗಾಮ್‌ದೇವಿ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಐಪಿಸಿ ಸೆಕ್ಷನ್ ೩೮೭ ಮತ್ತು ೫೦೬ (೨) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದೀಗ ಅದೇ ಇಮೇಲ್‌ನಿಂದ ಅಪರಿಚಿತ ವ್ಯಕ್ತಿಯೊಬ್ಬ ೩ನೇ ಇಮೇಲ್ ಬೆದರಿಕೆ ಪತ್ರ ಕಳುಹಿಸಿದ್ದು, ಮುಂಬೈ ಪೊಲೀಸರಿಗೆ ತಲೆನೋವು ತಂದಿದೆ.
ಅಂಬಾನಿಗೆ ಕೊಲೆ ಬೆದರಿಕೆ ಬರುತ್ತಿರುವುದು ಇದೇ ಮೊದಲೇನಲ್ಲ. ಕಳೆದ ವರ್ಷ ಮುಕೇಶ್ ಅಂಬಾನಿ ಮತ್ತು ಅವರ ಕುಟುಂಬ ಸದಸ್ಯರಿಗೆ ಕೊಲೆ ಬೆದರಿಕೆ ಕರೆಗಳನ್ನು ಮಾಡಿದ್ದಕ್ಕಾಗಿ ಬಿಹಾರದ ದರ್ಭಾಂಗ್‌ನ ವ್ಯಕ್ತಿಯನ್ನು ಮುಂಬಯಿ ಪೊಲೀಸರು ಬಂಧಿಸಿದ್ದರು. ಮುಂಬಯಿಲ್ಲಿನ ಸರ್ ಎಚ್.ಎನ್. ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಯನ್ನು ಸ್ಫೋಟಿಸುವುದಾಗಿ ಆರೋಪಿಗಳು ಬೆದರಿಕೆ ಬಂದಿತ್ತು.