೩ ದಿನ ಚಾಮುಂಡಿ ದರ್ಶನ ಬಂದ್

ಮೈಸೂರು, ಸೆ .೧೫- ಮಹಾಲಯ ಅಮಾವಾಸ್ಯೆ ಪ್ರಯುಕ್ತ ಬೆಟ್ಟಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರವೇಶಕ್ಕೆ ನಿರ್ಬಂಧ ವಿಧಿಸಿದೆ.
ಕೊರೊನಾ ಸೋಂಕಿತರ ಪ್ರಮಾಣ ದಿನೇ ದಿನೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಅಮಾವಾಸ್ಯೆಯೆಂದು ಭಕ್ತಾದಿಗಳ ಸಂಖ್ಯೆ ಹೆಚ್ಚಳವಾಗಲಿರುವ ಸಾಧ್ಯತೆ ಇರುವುದರಿಂದ ಚಾಮುಂಡಿ ಬೆಟ್ಟಕ್ಕೆ ಆಗಮಿಸುವ ಭಕ್ತರನ್ನು ನಿರ್ಬಂಧಿಸಲಾಗಿದೆ. ಅಲ್ಲದೇ ಬೆಟ್ಟಕ್ಕೆ ಸಂಪರ್ಕಿಸುವ ರಸ್ತೆಗಳನ್ನು ಕೂಡ ಬಂದ್ ಮಾಡಲು ನಿರ್ಧರಿಸಲಾಗಿದೆ.
ಕೊರೊನಾ ಹಾವಳಿಯಿಂದ ಆಷಾಢ ಶುಕ್ರವಾರ ಹಾಗೂ ಪ್ರತಿ ಶನಿವಾರ ಮತ್ತು ನಿರ್ಬಂಧಿಸಲಾಗಿತ್ತು. ನಂತರ ಕೆಲ ದಿನಗಳಿಂದ ನಿರ್ಬಂಧದಲ್ಲಿ ಸಡಿಲಿಕೆ ಮಾಡಲಾಗಿತ್ತು.
ನಿರ್ಭಂದ ಹಿನ್ನಲೆಯಲ್ಲಿ ಬೆಟ್ಟದ ಪಾದ ಬಳಿ ಪೊಲೀಸರ ನಿಯೋಜನೆ ಮಾಡಲಾಗಿದ್ದು, ಬ್ಯಾರಿಕೇಡ್ ಗಳನ್ನ ಹಾಕಿ ಪೊಲೀಸರು ರಸ್ತೆ ಬಂದ್ ಮಾಡಿದ್ದಾರೆ . ಇನ್ನು ಬೆಟ್ಟಕ್ಕೆ ಬರುವ ಭಕ್ತಾದಿಗಳನ್ನ ವಾಪಸ್ ಕಳುಹಿಸಲಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ ನಿರ್ಭಂದ ಜಿಲ್ಲಾಡಳಿತ ಹೇರಿದೆ.