
ಬೆಂಗಳೂರು, ಆಗಸ್ಟ್ ೨೯- ಮುಂದಿನ ನಾಲ್ಕು ದಿನಗಳ ಕಾಲ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆ ಮತ್ತು ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಅಧಿಕಾರಿಗಳು ಮುನ್ಸೂಚನೆ ನೀಡಿದ್ದಾರೆ.
೧೪ ಜಿಲ್ಲೆಗಳಲ್ಲಿ ಇಂದು ಹಳದಿ ಅಲರ್ಟ್ ಘೋಷಿಸಲಾಗಿದೆ.
ಮುಂದಿನ ಎರಡು ದಿನಗಳ ಕಾಲ ಕರ್ನಾಟಕದ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ಅಧಿಕಾರಿಗಳು ಎಚ್ಚರಿಸಿದ್ದಾರೆ.
ಬೀದರ್, ಬೆಳಗಾವಿ, ಬಾಗಲಕೋಟೆ, ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ತುಮಕೂರು, ಹಾಸನ, ಕೊಡಗು, ಮೈಸೂರು, ರಾಮನಗರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಭಾರಿ ಮಳೆ ಬೀಳುವ ಮುನ್ಸೂಚನೆ ನೀಡಲಾಗಿದೆ.
ಆಗಸ್ಟ್ ೩೦ ರಂದು ಚಿಕ್ಕಮಗಳೂರು, ಚಾಮರಾಜನಗರ, ೩೧ ರಂದು ಬಳ್ಳಾರಿ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಸೆ.೧ ರಂದು ರಾಯಚೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ ಜಿಲ್ಲೆಗಳಿಗೆ ’ಯೆಲ್ಲೊ ಅಲರ್ಟ್’ ಸೂಚನೆ ನೀಡಲಾಗಿದೆ.
ಇಲಾಖೆ ಪ್ರಕಾರ, ನೈಋತ್ಯ ಮುಂಗಾರು ಕರಾವಳಿ ಕರ್ನಾಟಕದಲ್ಲಿ ದುರ್ಬಲವಾಗಿದೆ ಮತ್ತು ಕರ್ನಾಟಕದ ಒಳಭಾಗದಲ್ಲಿ ಸಾಮಾನ್ಯವಾಗಿದೆ.
ಆಗಸ್ಟ್ ತಿಂಗಳಿನಲ್ಲಿ ಎಲ್ಲರೂ ಮಳೆಗಾಗಿ ಕಾಯುತ್ತಿದ್ದರು, ಆದರೆ ಮಳೆಯಾಗಲಿಲ್ಲ. ಇನ್ನು ಮುಂದೆ ಉತ್ತಮ ಮಳೆಯಾಗುವ ನಿರೀಕ್ಷೆಯಲ್ಲಿ ಎಲ್ಲರೂ ಇದ್ದಾರೆ.
ಇನ್ನು ಮಳೆ ಬಾರದಿದ್ದರೆ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಎದುರಾಗಲಿದೆ. ಕೆಆರ್‌ಎಸ್‌ನ ನೀರಿನ ಮಟ್ಟ ಕುಸಿಯುತ್ತಿದೆ.