೪ ಮಹಡಿ ಕಟ್ಟಡ ಕುಸಿದು ೪ ಸಾವು

ನವದೆಹಲಿ, ಸೆ.೯- ರಾಷ್ಟ್ರ ರಾಜಧಾನಿ ದೆಹಲಿಯ ಆಜಾದ್ ಮಾರುಕಟ್ಟೆ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿರುವ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಮೂವರು ಸಾವನ್ನಪ್ಪಿದ್ದಾರೆ.
ಇಂದು ಬೆಳಗ್ಗೆ ೮ ಗಂಟೆ ಸುಮಾರಿಗೆ ಕಟ್ಟಡವು ಇದ್ದಕ್ಕಿದ್ದಂತೆ ಕುಸಿದಾಗ ಕಟ್ಟಡದಲ್ಲಿ ಕೆಲಸ ನಡೆಯುತ್ತಿತ್ತು. ಪ್ರಾಥಮಿಕ ವರದಿಗಳ ಪ್ರಕಾರ, ಅಪಘಾತದಲ್ಲಿ ಐದು ಕಾರ್ಮಿಕರು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದರು. ಈ ಪೈಕಿ ಮೂವರು ಸಾವನ್ನಪ್ಪಿದರೆ, ಇಬ್ಬರು ಕಾರ್ಮಿಕರು ಗಾಯಗೊಂಡಿದ್ದಾರೆ.
ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ಅಗ್ನಿ ಶಾಮಕ ದಳದ ವಾಹನಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತವಾಗಿವೆ. ದುರಂತ ಕುರಿತು ಉನ್ನತ ಮಟ್ಟದ ತನಿಖೆಗೆ ಆದೇಶ ನೀಡಲಾಗಿದೆ. ಕಳಪೆ ಕಾಮಗಾರಿಯಿಂದ ಕಟ್ಟಡ ಕುಸಿದು ಬಿದ್ದಿದೆ ಎಂದು ವರದಿಯಾಗಿದೆ.