
ನವದೆಹಲಿ,ಏ.೬- ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಸಂಖ್ಯೆ ನಾಗಾಲೋಟದಲ್ಲಿ ಏರಿಕೆಯಾಗುತ್ತಿದ್ದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಬೆಚ್ಚಿ ಬೀಳಿಸುವಂತೆ ಮಾಡಿದೆ.ಕಳೆದ ವರ್ಷ ಸೆಪ್ಟಂಬರ್ ೨೩ ರ ಬಳಿಕ ದೇಶದಲ್ಲಿ ೫ ಸಾವಿರಕ್ಕೂ ಅಧಿಕ ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ನಿನ್ನೆ ದಾಖಲಾಗಿದ್ದ ಸೋಂಕಿಗಿಂತ ಶೇ.೨೦ ರಷ್ಟು ಸೋಂಕು ಹೆಚ್ಚಾಗಿರುವುದು ಆತಂಕಕ್ಕೆ ಎಡೆ ಮಾಡಿದೆ.
ಕಳೆದ ೨೪ ಗಂಟೆಗಳಲ್ಲಿ ಹೊಸದಾಗಿ ೫,೩೩೫ ಮಂದಿಯಲ್ಲಿ ಹೊಸ ಕೋವಿಡ್ ಸೋಂಕು ಕಾಣಿಸಕೊಂಡಿದೆ.೧೩ ಮಂದಿ ಸಾವನ್ನಪ್ಪಿದ್ದಾರೆ.ದಿನೇ ದಿನೇ ಸಕ್ರಿಯ ಪ್ರಕರಣಗಳು ಏರಿಕೆ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ೨೫,೫೮೭ಕ್ಕೆ ಏರಿಕೆಯಾಗಿದೆ . ಒಟ್ಟಾರೆ ಪಾಸಿಟಿವಿಟಿ ಪ್ರಮಾಣ ಶೇ.೩.೩೨ ರಷ್ಟು ಇದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.ಸಕ್ರಿಯ ಪ್ರಕರಣಗಳ ಪೈಕಿಕೇರಳದಲ್ಲಿ ೮,೨೨೯ ಮಂದಿಯಲ್ಲಿ ಸೋಂಕು ಕಾಣಿಸಿಕೊಳ್ಳುವ ಮೂಲಕ ಮೊದಲ ಸ್ಥಾನದಲ್ಲಿದೆ. ಜೊತೆಗೆ ಮಹಾರಾಷ್ಟ್ರದಲ್ಲಿ ೩೮೭೪ ಮಂದಿಯೊಂದಿಗೆ ಎರಡನೇ ಸ್ಥಾನದಲ್ಲಿದೆ ಎಂದು ಸಚಿವಾಲಯ ತಿಳಿಸಿದೆ.ಸೋಂಕಿನಿಂದ ೧೭೮೪ ಮಂದಿ ಚೇತರಿಸಿಕೊಂಡು ಬಿಡುಗಡೆಯಾಗಿದ್ದಾರೆ. ಹೊಸದಾಗಿ ಸೋಂಕು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದ್ದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ ಎಂದು ತಿಳಿಸಿದೆ.ಹೊಸದಾಗಿ ಕಾಣಿಸಿಕೊಂಡಿರುವ ಸೋಂಕು ಸಂಖ್ಯೆ ಸೇರಿದಂತೆ ಇಲ್ಲಿಯ ತನಕ ಒಟ್ಟು ಸೋಂಕಿತರ ಸಂಖ್ಯೆ ,೪,೪೭,೩೩,೭೯೨ ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸಕ್ರಿಯ ಪ್ರಕರಗಳ ಸಂಖ್ಯೆ ಶೇ.೦.೫ ರಷ್ಟು ಇದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.ದೇಶದಲ್ಲಿ ಹೊಸದಾಗಿ ಸೋಂಕಿನಿಂದ ಮೃತಪಟ್ಡಿರುವರೂ ಸೇರಿದಂತೆ ಇಲ್ಲಿಯ ತನಕ ೫,೩೦,೯೦೨೯ ಮಂದಿಗೆ ಏರಿಕೆಯಾಗಿದೆ. ಸೋಂಕಿನಿಂದ ಚೇತರಿಸಿಕೊಂಡವರ ಒಟ್ಟು ಪ್ರಮಾಣ ಶೇ.೯೮.೭೭ಕ್ಕೆ ಏರಿಕೆಯಾಗಿದೆ ಎಂದು ಸಚಿವಾಲಯ ಹೇಳಿದೆ.ಕೊರೊನಾ ಸೋಂಕಿನ ದಿನದ ಪಾಸಿಟಿವಿ ಪ್ರಮಾಣ ಶೇ. ೩ ರಷ್ಟು ಇದ್ದು ವಾರದ ಸರಾಸರಿ ಪ್ರಮಾಣ ,ಶೇ.೨.೫೬ ರಷ್ಟು ಇದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.