೫೦ ಹಾಸಿಗೆ ಕೋವಿಡ್ ಕೇರ್ ಸೆಂಟರ್ ಸ್ಥಾಪಿಸಿ : ಆಲ್ಕೋಡ್

ಲಿಂಗಸುಗೂರು,ಮೇ.೨೦- ಸ್ಥಳೀಯ ಶಾಸಕರು, ಮಾಜಿ ಶಾಸಕರು ತಾಲೂಕಿನ ಪ್ರತಿ ತಾಲೂಕು ಪಂಚಾಯಿತಿ ಕ್ಷೇತ್ರದಲ್ಲಿ ಕೋವಿಡ್ ಕೇರ್ ಸೆಂಟರ್ ಸ್ಥಾಪಿಸಿ ತಮ್ಮ ಜವಬ್ದಾರಿ ನಿರ್ವಹಿಸಬೇಕು ಎಂದು ಕೆಪಿಸಿಸಿ ವಕ್ತಾರ ಹನುಮಂತಪ್ಪ ಆಲ್ಕೋಡ್ ಒತ್ತಾಯಿಸಿದ್ದಾರೆ.
ಡಿ.ಎಸ್.ಹೂಲಗೇರಿ ಅವರಿಗೆ ಕ್ಷೇತ್ರದ ಜನತೆ ಅಧಿಕಾರ ನೀಡಿದ್ದಾರೆ. ಇದುಲ್ಲದೆ ಮಾನಪ್ಪ ವಜ್ಜಲ್ ಅವರು ಎರಡು ಭಾರಿ ಶಾಸಕರಾಗಿದ್ದರು, ಈಗ ಹಟ್ಟಿ ಚಿನ್ನದ ಗಣಿ ಅಧ್ಯಕ್ಷ ಸ್ಥಾನ ಸಿಕ್ಕಿದೆ. ಈ ಇಬ್ಬರು ನಾಯಕರು ಆರ್ಥಿಕವಾಗಿ ಸ್ಥಿತಿವಂತರಾಗಿದ್ದಾರೆ. ಇಬ್ಬರು ನಾಯಕರು ಕ್ಷೇತ್ರದ ಜನತೆಯ ಆರೋಗ್ಯ ರಕ್ಷಣೆ ಮಾಡುವುದು ಆಧ್ಯ ಕರ್ತವ್ಯವಾಗಿದೆ. ಅದರಂತೆ ಗ್ರಾಮೀಣ ಭಾಗದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಜನರ ಆರೋಗ್ಯ ದೃಷ್ಠಿಯಿಂದ ಎಲ್ಲಾ ತಾಲೂಕು ಪಮಚಾಯಿತಿ ಕ್ಷೇತ್ರದಲ್ಲಿ ೫೦ ಹಾಸಿಗೆ ಕೋವಿಡ್ ಕೇರ್ ಸೆಂಟರ್ ನಿರ್ಮಾಣ ಮಾಡಿ ಆಕ್ಸಿಜನ್, ಅಗತ್ಯ ಔಷದಿ ಒದಗಿಸುವ ಕೆಲಸ ಮಾಡುವ ಮೂಲಕ ಜನತೆಯ ಸಹಾಯಕ್ಕೆ ಬರಬೇಕು. ೨೦೧೮ರ ವಿಧಾನಸಭಾ ಚುನಾವಣೆಯ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ದಿಸಿ ಸ್ವಲ್ಪ ಮತಗಳ ಅಂತರದಿಂದ ಪರಾಜಿತರಾದ ಸಿದ್ದು ಬಂಡಿ ಅವರು ಕೂಡಾ ಸಂಕಷ್ಟದಲ್ಲಿರುವ ಪ್ರತಿ ಕುಟಂಬಕ್ಕೆ ಆರ್ಥಿಕ ಸಹಾಯ ಮಾಡಬೇಕು. ಆಸ್ಪತ್ರೆಗಳಿಗೆ ಆಂಬುಲೆನ್ಸ್ ವಾಹನಗಳನ್ನು ಒದಗಿಸಬೇಕು ಎಂದು ಆಗ್ರಹಿಸಿದರು. ಆರ್ಥಿಕವಾಗಿ ಸ್ಥಿತಿವಂತರಾದ ಈ ಮೂರು ಜನರು ಚುನಾವಣೆಯಲ್ಲಿ ಹಣ ಖರ್ಚು ಮಾಡುವ ಬದಲು ಇಂತಹ ಸಂದರ್ಭದಲ್ಲಿ ಹಣ ಖರ್ಚು ಮಾಡಿ ಹಳ್ಳಿಯಲ್ಲಿರುವ ಜನರು ಬಹಳಷ್ಟು ಸಂಕಷ್ಟ ಅನುಭವಿಸುತ್ತಿದ್ದಾರೆ ಅವರಿಗೆ ಸಹಾಯ ಮಾಡಿದಂತಾಗುತ್ತಿದೆ ಎಂದು ಸಲಹೆ ನೀಡಿದ್ದಾರೆ.