೫ ಬಾರಿ ೪ ವಿಕೆಟ್ ಪಡೆದ ಅಮಿತ್‌ಮಿಶ್ರಾ


ಮುಂಬೈ,ಏ.೨೨- ಪ್ರಸ್ತುತ ನಡೆಯುತ್ತಿರುವ ೧೪ನೇ ಐಪಿಎಲ್ ಆವೃತ್ತಿಯಲ್ಲಿ ಬೌಲರ್ ಅಮಿತ್ ಮಿಶ್ರಾ ೫ ಬಾರಿ ೪ ವಿಕೆಟ್ ಪಡೆದ ಕೀರ್ತಿಗೆ ಭಾಜನರಾಗಿದ್ದಾರೆ.
ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವೆ ನಡೆದ ಪಂದ್ಯದಲ್ಲಿ ಡೆಲ್ಲಿ ತಂಡ ೬ ವಿಕೆಟ್‌ಗಳಿಂದ ಗೆಲುವು ಸಾಧಿಸಿತು. ಈ ಗೆಲುವಿಗೆ ಅನುಭವಿ ಲೆಗ್ ಸ್ಪಿನ್ನರ್ ಅಮಿತ್ ಮಿಶ್ರಾ ಪ್ರಮುಖಪಾತ್ರ ವಹಿಸಿದ್ದರು. ಈ ಮೂಲಕ ಐಪಿಎಲ್‌ನಲ್ಲಿ ೫ ಬಾರಿ ೪ ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ.
ವೆಸ್ಟ್‌ಇಂಡೀಸ್‌ನ ಬೌಲರ್ ಸುನಿಲ್ ನರೇನ್ ಪ್ರಸ್ತುತ ಐಪಿಎಲ್‌ನಲ್ಲಿ ಕೆಕೆಆರ್ ತಂಡದ ಪರ ಆಡುತ್ತಿದ್ದು, ಐಪಿಎಲ್‌ನಲ್ಲಿ ೭ ಬಾರಿ ೪ ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ.