೫ ವರ್ಷದವರೆಗೂ ಮಕ್ಕಳಿಗೆ ಸ್ತನ್ಯಪಾನ ಜಾಗೃತಿ ಅಗತ್ಯ

ರಾಯಚೂರು.ಆ.೦೧- ಮಕ್ಕಳಿಗೆ ೫ ವರ್ಷವರೆಗೂ ಸ್ತನ್ಯ ಪಾನ ಮಾಡಿಸುವ ಮೂಲಕ ಮಕ್ಕಳ ಆರೋಗ್ಯ ರಕ್ಷಣೆಯ ಬಗ್ಗೆ ತಾಯಂದಿರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವ ಅಗತ್ಯವಿದೆಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ರವೀಂದ್ರ ಜಲ್ದಾರ್ ಅವರು ಹೇಳಿದರು.
ವಾರ್ಡ್ ೧೩ ರಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಮಾತನಾಡಿದರು. ಮಕ್ಕಳಿಗೆ ಸ್ತನ್ಯ ಪಾನ ಕೊರತೆಯಿಂದ ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಹೀನತೆಗೆ ದಾರಿ ಮಾಡುತ್ತದೆ. ಅಲ್ಲದೆ, ಮಕ್ಕಳು ಭವಿಷ್ಯತ್ತಿನಲ್ಲಿ ಆರೋಗ್ಯಕರ ಜೀವನ ನಿರ್ವಹಿಸಲು ತಾಯಂದಿರ ಹಾಲು ಕುಡಿಸುವ ಜವಾಬ್ದಾರಿ ಬಗ್ಗೆ ಜಾಗೃತಿ ಮೂಡಿಸುವ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಆಶಾ ಕಾರ್ಯಕರ್ತರು ಮನೆ ಮನೆಗೆ ತೆರಳಿ, ತಾಯಂದಿರಲ್ಲಿ ಜಾಗೃತಿ ಮೂಡಿಸುವ ಕಾರ್ಯ ನಿರ್ವಹಿಸಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆಯ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.