೬೦ ಅಡಿ ಆಳದ ಬೋರ್‌ವೆಲ್‌ಗೆ ಬಿದ್ದ ಬಾಲಕಿ


ಗುಜರಾತ್, ಜು. ೨೯- ಗುಜರಾತಿನ ಸುರೇಂದ್ರನಗರ ಜಿಲ್ಲೆಯಲ್ಲಿ ಬಾಲಕಿಯೊಬ್ಬಳು ತೆರೆದ ಬೋರ್‌ವೆಲ್‌ಗೆ ಬಿದ್ದ ಘಟನೆ ನಡೆದಿದೆ.
ಸುರೇಂದ್ರನಗರದ ಗಜನ್ವಾವ್ ಗ್ರಾಮದಲ್ಲಿ ಬಾಲಕಿ ಮೈದಾನದಲ್ಲಿ ಆಟವಾಡುತ್ತಿದ್ದಾಗ ಕಾಲು ಜಾರಿ ತೆರೆದ ಬೋರ್‌ವೆಲ್‌ಗೆ ಬಿದ್ದಿದ್ದಾಳೆ.
ಸುಮಾರು ೬೦ ಅಡಿಗಳಷ್ಟು ಆಳವಿರುವ ತೆರೆದ ಕೊಳವೆ ಬಾವಿಗೆ ಬಿದ್ದು ಬಾಲಕಿ ಸಿಲುಕಿಕೊಂಡಿದ್ದಾರೆ. ಈ ನಡುವೆ ತಹಸೀಲ್ದಾರ್ ಹಾಗೂ ವಿಪತ್ತು ನಿರ್ವಹಣಾ ತಂಡ ಈಗಾಗಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಬಾಲಕಿಯ ರಕ್ತಣೆಗೆ ಮುಂದಾಗಿದ್ದಾರೆ.
ಇನ್ನು ಸ್ಥಳಕ್ಕೆ ರಕ್ಷಣಾ ಸಿಬ್ಬಂದಿಗಳು ದೌಡಾಯಿಸಿ ಬಾಲಕಿಯನ್ನು ರಕ್ಷಿಸುವ ಕಾರ್ಯಾಚರಣೆಯನ್ನು ಕೈಗೊಳ್ಳಲಾಗಿದೆ.