೬೦ ಕ್ಕೂ ಹೆಚ್ಚು ಗೋವುಗಳ ಹತ್ಯೆ

ಹಾಸನ,ಮಾ.೨೯- ಅಕ್ರಮ ಗೋಮಾಂಸ ಮಾರಾಟಕ್ಕಾಗಿ ಜಾನುವಾರುಗಳ ಮಾರಣಹೋಮ ನಡೆಸಿದ ಘಟನೆ ತಡ ರಾತ್ರಿ ಚನ್ನರಾಯಪಟ್ಟಣದ ಬಾಗೂರು ರಸ್ತೆ ಬಳಿ ನಡೆದಿದೆ.ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದಾಗ ೬೦ ಕ್ಕೂ ಹೆಚ್ಚು ಗೋವುಗಳನ್ನು ಹತ್ಯೆ ಮಾಡಿದ್ದಾರೆ,ಗೋವುಗಳ ಹತ್ಯೆ ವಿಚಾರ ತಿಳಿದ ಕೂಡಲೇ ಮಧ್ಯರಾತ್ರಿ ೧೨.೩೦ರ ವೇಳೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಅಷ್ಟರಲ್ಲೇ ಕರುಗಳು ಸೇರಿದಂತೆ ೬೦ಕ್ಕೂ ಹೆಚ್ಚು ಜಾನುವಾರಗಳನ್ನು ಹತ್ಯೆ ಮಾಡಿ ರುಂಡಗಳನ್ನು ಬೇರ್ಪಡಿಸಿ, ಕೈಕಾಲುಗಳನ್ನು ಕತ್ತರಿಸಿ, ಚರ್ಮ ಸುಲಿದು ನೇತು ಹಾಕಲಾಗಿತ್ತು., ಐದು ಗೋವುಗಳನ್ನು ಪೊಲೀಸರು ರಕ್ಷಣೆ ಮಾಡಿದ್ದು, ಸಾವಿರ ಕೆಜಿಗೂ ಅಧಿಕ ಗೋಮಾಂಸವನ್ನು ವಶಕ್ಕೆ ಪಡೆದಿದ್ದಾರೆ.
ಕೆರೆಗೆ ಹರಿದ ಗೋವುಗಳ ರಕ್ತ:
ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗೋವುಗಳ ಮಾರಣಹೋಮ ನಡೆಸಿ ಗೋಹಂತಕರು ಗೋವುಗಳ ರಕ್ತವನ್ನು ಪಕ್ಕದ ಕೆರೆಗೆ ಹರಿಸಿದ್ದಾರೆ. ಪೊಲೀಸರು ದಾಳಿ ನಡೆಸುತ್ತಿದ್ದಂತೆ ಗೋಹಂತಕರು ಸ್ಥಳದಿಂದ ಪರಾರಿಯಾಗಿದ್ದಾರೆ.