೬೫ನೇ ಕರ್ನಾಟಕ ರಾಜ್ಯೋತ್ಸವ, ವಿಶೇಷಾಧಿಕಾರಿಗಳಿಂದ ಧ್ವಜಾರೋಹಣ


ರಾಯಚೂರು, ನ.೩- ಕನ್ನಡ ನಾಡು ಏಕೀಕರಣವಾಗಲು ನಾಡಿನ ಕವಿಗಳು, ಸಾಹಿತಿಗಳು, ಕಲಾವಿದರು, ವಿಚಾರವಂತರು ಸೇರಿದಂತೆ ಹಲವಾರು ಮಹನೀಯರು ಹೋರಾಟದ ಫಲವಾಗಿ ನಾವಿಂದು ಏಕೀಕೃತ ನಾಡನ್ನು ಕಟ್ಟಿಕೊಂಡಿದ್ದೇವೆ ಎಂದು ಸ್ನಾತಕೋತ್ತರ ಕೇಂದ್ರದ ವಿಶೇಷಾಧಿಕಾರಿ ಪ್ರೊ.ಪಾರ್ವತಿ ಸಿ.ಎಸ್. ಅವರು ಹೇಳಿದರು.
ನಗರದ ಗುಲಬರ್ಗಾ ವಿಶ್ವವಿದ್ಯಾಲಯದ ಯರಗೇರಾ ಸ್ನಾತಕೋತ್ತರ ಕೇಂದ್ರದ ಆವರಣದಲ್ಲಿ ೬೫ನೇಯ ಕರ್ನಾಟಕ ರಾಜ್ಯೋತ್ಸವ ಆಚರಣೆಯ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕನ್ನಡದ ಇತಿಹಾಸ, ಮಹತ್ವ, ಹೋರಾಟಗಳ ಬಗ್ಗೆ ಮುಂದಿನ ಪೀಳಿಗೆಗೆ ತಿಳಿಸುವ ಉದ್ದೇಶದಿಂದ ಹಾಗೂ ಕರ್ನಾಟಕ ಏಕೀಕರಣಕ್ಕೆ ಹೋರಾಡಿದ ಮಹನೀಯರನ್ನು ಸ್ಮರಿಸುವ ಉದ್ದೇಶದಿಂದ ಕನ್ನಡ ರಾಜ್ಯೋತ್ಸವ ಅತ್ಯಂತ ಮಹತ್ವ ಪಡೆದುಕೊಂಡಿದೆ ಅಲ್ಲದೆ ಈ ಕನ್ನಡವನ್ನು, ಕನ್ನಡ ನಾಡನ್ನು ಒಡೆಯುವ ದನಿಯನ್ನು ನಾವು ಧಿಕ್ಕರಿಸಬೇಕು ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಉಪಕರಣಾತ್ಮಕ ತಂತ್ರಜ್ಞಾನ ವಿಭಾಗ ಪ್ರಾಧ್ಯಾಪಕ ಡಾ.ಪಿ.ಭಾಸ್ಕರ್, ದೈಹಿಕ ಶಿಕ್ಷಣ ವಿಭಾಗದ ಸಹಾಯಕ ನಿರ್ದೇಶಕ ವಾಸುದೇವ ಜೇವರ್ಗಿ, ಸಹಾಯಕ ಗ್ರಂಥ