೬ ನೇ ತರಗತಿಗೆ ಪ್ರವೇಶ ಸೆ.೧೮ ಕೊನೆ ದಿನ

ಜಗಳೂರು.ಸೆ.೯; 2020-21 ನೇ ಸಾಲಿನ ಪ್ರತಿಭಾನ್ವಿತ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳನ್ನು ಪ್ರತಿಷ್ಠಿತ ಶಾಲೆಗಳಿಗೆ 6 ನೇ ತರಗತಿಗೆ ಅರ್ಹತಾ ಪರೀಕ್ಷೆಯ ಮೂಲಕ ಆಯ್ಕೆ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು 5 ನೇ ತರಗತಿಯಲ್ಲಿ ಶೇಕಡ 60 ಕ್ಕಿಂತ ಹೆಚ್ಚು ಅಂಕ ಪಡೆದು ಉತ್ತೀರ್ಣರಾಗಿರಬೇಕು ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ವರಮಾನ 2 ಲಕ್ಷದೊಳಗೆ ಇರಬೇಕು ಹಾಗೂ ಅರ್ಜಿಯೊಂದಿಗೆ ಜಾತಿ ಪ್ರಮಾಣ ಪತ್ರ ಅಂಕಪಟ್ಟಿ ಹಾಗೂ ಆದಾಯ ಪ್ರಮಾಣ ಪತ್ರಗಳನ್ನು ಆಯಾ ತಾಲೂಕಿನಲ್ಲಿ ಸಲ್ಲಿಸಬಹುದಾಗಿದೆ ಅರ್ಜಿ ಸಲ್ಲಿಸಲು ಸೆ.18 ಕ್ಕೆ ನಿಗದಿಪಡಿಸಲಾಗಿದೆ ಹೆಚ್ಚಿನ ಮಾಹಿತಿಗಾಗಿ ಜಗಳೂರು ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಬಿ.ಮಹೇಶ್ವರಪ್ಪ (ಮೊಬೈಲ್ ನಂಬರ್ –9731707909) ಇವರನ್ನು ಸಂಪರ್ಕಿಸಲು ಕೋರಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.