
ನವದಹಲಿ,ಏ.೧೩- ಮುಂದಿನ ಒಂದು ವರ್ಷದಲ್ಲಿ ದೇಶದಲ್ಲಿ ಹತ್ತು ಲಕ್ಷ ಉದ್ಯೋಗ ನೀಡುವ ಮಹತ್ವಾಕಾಂಕ್ಷಿ ಗುರಿಯೊಂದಿಗೆ ಹೆಜ್ಜೆ ಇಟ್ಟಿರುವ ಕೇಂದ್ರ ಸರ್ಕಾರ, ಕೇಂದ್ರ ಸರ್ಕಾರಿ ಮತ್ತು ಸ್ವಾಯತ್ತ ಸಂಸ್ಥೆಗಳಲ್ಲಿ ನೇಮಕವಾದ ೭೧,೦೦೦ ಅಭ್ಯರ್ಥಿಗಳಿಗೆ ಪ್ರಧಾನಿ ನರೇಂದ್ರ ಮೋದಿ ನೇಮಕಾತಿ ಪತ್ರವನ್ನು ಹಸ್ತಾಂತರ ಮಾಡಿದರು.ನಾಲ್ಕನೇ ಬಾರಿಗೆ ದೇಶದಲ್ಲಿ ನೇಮಕಾತಿ ಪತ್ರವನ್ನು ಪ್ರಧಾನಿ ನರೇಂದ್ರ ಮೋದಿ ಹಸ್ತಾಂತರ ಮಾಡಿದರು. ಇದಕ್ಕೂ ಮುನ್ನ ಮೊದಲ ಬಾರಿಗೆ ೭೫೦೦೦ ಅಭ್ಯರ್ಥಿಗಳು ಹಾಗೂ ಎರಡು ಮತ್ತು ಮೂರನೇ ಹಂತದಲ್ಲಿ ತಲಾ ಎಪ್ಪತ್ತೊಂದು ಸಾವಿರ ಮಂದಿಗೆ ನೇಮಕಾತಿ ಪತ್ರವನ್ನು ನೀಡಿದ್ದರು.ವರ್ಚುಯಲ್ ಮೂಲಕ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಾಂಕೇತಿಕವಾಗಿ ನೇಮಕಾತಿ ಪತ್ರಗಳನ್ನು ವಿತರಿಸಿದರು.ಈ ವೇಳೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ಆತ್ಮನಿರ್ಭರ್ ಭಾರತವಾಗಿಸಲು ದೇಶದ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗ ಸೃಷ್ಟಿಗೆ ಒತ್ತು ನೀಡಲಾಗಿದೆ.ಆಟಿಕೆ ಉದ್ಯಮ. ಹೊಸ ಉದ್ಯೋಗಾವಕಾಶಗಳ ಪೀಳಿಗೆಗೆ ಕಾರಣವಾಗುತ್ತದೆ ಎಂದು ಹೇಳಿದ್ದಾರೆ.
೭೦,೦೦೦ ಕ್ಕೂ ಹೆಚ್ಚು ಯುವಕರು ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸರ್ಕಾರಿ ಉದ್ಯೋಗಗಳನ್ನು ಪಡೆದಿದ್ದಾರೆ. ಸ್ಟಾರ್ಟ್‌ಅಪ್‌ಗಳಿಂದ ೪೦ ಲಕ್ಷ ನೇರ ಮತ್ತು ಪರೋಕ್ಷ ಉದ್ಯೋಗಗಳನ್ನು ಸೃಷ್ಟಿಸಿವೆ ಎಂದು ಅವರು ಹೇಳಿದ್ದಾರೆ.
ಬಿಜೆಪಿ ಆಡಳಿತದಲ್ಲಿ ಉದ್ಯೋಗ ಸೃಷ್ಢಿ:
ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ೭೦,೦೦೦ ಕ್ಕೂ ಹೆಚ್ಚು ಯುವಕರು ಸರ್ಕಾರಿ ಉದ್ಯೋಗಗಳನ್ನು ಪಡೆದಿದ್ದಾರೆ ಉದ್ಯೋಗ ಪಡೆದ ಎಲ್ಲರಿಗೂ ಅಭಿನಂಧನೆ ಎಂದು ಅವರು ತಿಳಿಸಿದ್ದಾರೆ.ಎನ್‌ಡಿಎ ಮತ್ತು ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಸರ್ಕಾರಿ ಉದ್ಯೋಗ ನೀಡುವ ಪ್ರಕ್ರಿಯೆಯು ತ್ವರಿತ ಗತಿಯಲ್ಲಿ ನಡೆಯುತ್ತಿದೆ. ನಿನ್ನೆ ಮದ್ಯ ಪ್ರದೇಶದಲ್ಲಿ ೨೨,೦೦೦ ಶಿಕ್ಷಕರಿಗೆ ನೇಮಕಾತಿ ಪತ್ರ ಹಸ್ತಾಂತರಿಸಲಾಗಿದೆ ಎಂದು ಹೇಳಿದ್ದಾರೆ.
ಈಶಾನ್ಯ ರಾಜ್ಯಗಳಿಗೆ ಆದ್ಯತೆ:
ಈ ಬಾರಿ ಈಶಾನ್ಯ ರಾಜ್ಯಗಳನ್ನು ಗಮನದಲ್ಲಿಟ್ಟುಕೊಂಡು ಆ ಭಾಗದ ಅಭ್ಯರ್ಥಿಗಳಿಗೆ ರೈಲ್ವೆ, ಆದಾಯ ತೆರಿಗೆ ಇಲಾಖೆ , ಕೇಂದ್ರೀಯ ಮೀಸಲು ಪೊಲೀಸ್ ಪಡೆ, ಅಂಚೆ ಕಚೇರಿ, ಸಹಾಯಕ ಪ್ರಾಧ್ಯಾಪಕ ಹುದ್ದೆಗಳು, ಶಿಕ್ಷಕರು, ಗ್ರಂಥಪಾಲಕರು, ದಾದಿಯರು, ತರಬೇತಿ ನಿನತ ಅಧಿಕಾರಿಗಳು ಸೇರಿದಂತೆ ವಿವಿಧ ವಲಯಗಳಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರವನ್ನು ಪ್ರಧಾನಿ ಹಸ್ತಾಂತರ ಮಾಡಿದರು ಅಸ್ಸಾಂನ ಗುಹಹಟಿಯ ರೈಲ್ವೆ ರಂಗ್ ಭವನ್ ಸಂಸ್ಕೃತ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಬಂದರೂ ಹಡಗು ಮತ್ತು ಜಲ ಸಾರಿಗೆ ಸಚಿವ ಸರ್ಬಾನಂದ ಸೋನವಾಲ ಉಪಸ್ಥಿತರಿದ್ದು ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರವನ್ನು ನೀಡಿದರು.ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿಶ್ಚಿತ್ ಪ್ರಾಮಾಣಿಕ್ ಅವರು ನ್ಯೂ ಜಲ್ ಪೈ ಗುರಿಯಲ್ಲಿ ಅಭ್ಯರ್ಥಿಗಗಳಿಗೆ ನೇಮಕಾತಿ ಪ್ರಮಾಣ ಪತ್ರ ವಿತರಿಸಿದರು.ದಿಮಾಪುರ್ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕೇಂದ್ರ ಪೆಟ್ರೋಲಿಯಂ, ಹಾಗು ನೈಸರ್ಗಿಕ ಖಾತೆ ಅನಿಲ ಸಚಿವ ರಾಮೇಶ್ವರ್ ತೇಲಿ ವಿವಿಧ ಹುದ್ದೆಗಳಿಗೆ ಆಯ್ಕೆಯಾದವರಿಗೆ ನೇಮಕಾತಿ ಪತ್ರ ನೀಡಿದರು.