೭ ದಿನ ಜಾಮೀನು ವಿಸ್ತರಣೆ ಕೋರಿ ಕೇಜ್ರಿ ಸುಪ್ರೀಂಗೆ ಮೊರೆ

ನವದೆಹಲಿ: ಮಧ್ಯಂತರ ಜಾಮೀನು ಅವಧಿಯನ್ನು ಏಳು ದಿನಗಳ ಕಾಲ ವಿಸ್ತರಿಸುವಂತೆ ಕೋರಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸುಪ್ರೀಂಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ.
ಅಬಕಾರಿ ನೀತಿ ಹಗರಣದಲ್ಲಿ ಪ್ರಮುಖ ಆರೋಪಕ್ಕೆ ಗುರಿಯಾಗಿರುವ ಕೇಜ್ರಿವಾಲ್ ಗೆ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಪರ ಪ್ರಚಾರ ನಡೆಸಲು ಸುಪ್ರೀಂಕೋರ್ಟ್ ಇತ್ತೀಚೆಗೆ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು.
ತಾವು ಗಂಭೀರ ಸ್ವರೂಪದ ಕಾಯಿಲೆಯಿಂದ ಬಳುತ್ತಿದ್ದು, ಪಿಇಟಿ ಹಾಗೂ ಸಿಟಿ ಸ್ಕ್ಯಾನ್ ಮಾಡುವ ಅವಶ್ಯಕತೆಯಿದೆ. ಈ ಹಿನ್ನೆಲೆಯಲ್ಲಿ ಜಾಮೀನು ಅವಧಿ ವಿಸ್ತರಿಸುವಂತೆ ಕೇಜ್ರಿವಾಲ್ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.
೭ ನೇ ಹಂತದ ಲೋಕಸಭಾ ಚುನಾವಣೆ ಕಾರಣ್ಕಾಗಿ ಕೇಜ್ರಿವಾಲ್ ಗೆ ಜೂನ್ ಒಂದರವರೆಗೆ ಜಾಮೀನು ನೀಡಲಾಗಿದ್ದು, ಜೂನ್ ೨ರಂದು ತಿಹಾರ್ ಜೈಲಿಗೆ ಶರಣಾಗಬೇಕಾಗಿತ್ತದೆ.
ಮೇ ೧೭ ರಂದು, ಜಾರಿ ನಿರ್ದೇಶನಾಲಯವು (ಇಡಿ) ಕೇಜ್ರಿವಾಲ್ ಅವರ ಬಂಧನವನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಯ ತೀರ್ಪನ್ನು ಸುಪ್ರೀಂ ಕೋರ್ಟ್ ಕಾಯ್ದಿರಿಸಿತ್ತು. ಈ ವೇಳೆ ಸಾಮಾನ್ಯ ಜಾಮೀನಿಗಾಗಿ ಕೆಳ ನ್ಯಾಯಾಲಯವನ್ನು ಸಂಪರ್ಕಿಸಲು ನ್ಯಾಯಾಲಯ ಅವರಿಗೆ ಅನುಮತಿ ನೀಡಿತ್ತು.
ಕೇಜ್ರಿವಾಲ್ ಅಲ್ಲದೆ, ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ತನಿಖಾ ಸಂಸ್ಥೆ ಮನೀಶ್ ಸಿಸೋಡಿಯಾ ಅವರನ್ನು ಕೂಡ ಬಂಧಿಸಿದೆ. ಅವರು ಈಗ ಜೈಲಿನಲ್ಲಿದ್ದಾರೆ. ಈ ಪ್ರಕರಣದಲ್ಲಿ ಎಎಪಿ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಅವರನ್ನೂ ಬಂಧಿಸಲಾಗಿತ್ತು. ಆದರೆ, ಅವರು ಸುಪ್ರೀಂ ಕೋರ್ಟ್‌ನಿಂದ ಜಾಮೀನು ಪಡೆದಿದ್ದಾರೆ.