1 ರಿಂದ 9 ಪರೀಕ್ಷೆ ಇಲ್ಲದೆ ತೇರ್ಗಡೆಗೆ ಚಿಂತನೆ

ಬೆಂಗಳೂರು, ಏ. ೪- ದೇಶದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಲ್ಲಿ ೧ ರಿಂದ ೯ನೇ ತರಗತಿಯವರೆಗೆ ಪರೀಕ್ಷೆಗಳನ್ನು ನಡೆಸದೆ ವಿದ್ಯಾರ್ಥಿಗಳನ್ನು ಉತ್ತೀರ್ಣ ಮಾಡಲು ತೀರ್ಮಾನ ಕೈಗೊಂಡಿರುವ ಬೆನ್ನಲ್ಲೆ ರಾಜ್ಯದಲ್ಲೂ ಇಂತಹುದೇ ತೀರ್ಮಾನವಾಗುವ ಸಾಧ್ಯತೆಗಳಿದ್ದು ೧ ರಿಂದ ೯ನೇ ತರಗತಿಯ ಮಕ್ಕಳಿಗೆ ಪರೀಕ್ಷೆ ನಡೆಸದೆಯೇ ಉತ್ತೀರ್ಣ ಮಾಡುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚಿಂತನೆಗಳು ನಡೆದಿವೆ.
ಕೊರೊನಾ ಸೋಂಕಿನ ೨ನೇ ಅಲೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ೧ ರಿಂದ ೯ನೇ ತರಗತಿವರೆಗೆ ಲಿಖಿತ ಪರೀಕ್ಷೆಗಳನ್ನು ನಡೆಸದೆಯೇ ವಿದ್ಯಾರ್ಥಿಗಳನ್ನು ಉತ್ತೀರ್ಣ ಮಾಡುವುದು ಸೂಕ್ತ ಎಂಬ ಅಭಿಪ್ರಾಯಗಳು ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ರಾಜ್ಯಸರ್ಕಾರ ನಾಳೆ ಮಹತ್ವದ ಸಭೆ ಕರೆದಿದ್ದು, ಈ ಸಭೆಯಲ್ಲಿ ೧ ರಿಂದ ೯ನೇ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಬೇಕೇ ಬೇಡವೇ ಹಾಗೆಯೇ ಮುಂದಿನ ತರಗತಿಗೆ ಉತ್ತೀರ್ಣ ಮಾಡಬೇಕೇ ಎಂಬ ಬಗ್ಗೆ ತೀರ್ಮಾನ ಆಗಲಿದೆ.
ಶಿಕ್ಷಣ ಸಚಿವ ಸುರೇಶ್‌ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಸಭೆಯಲ್ಲಿ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು, ಶಿಕ್ಷಣ ತಜ್ಞರು ಹಾಗೂ ಖಾಸಗಿ ಶಾಲೆಗಳ ಸಂಘಟನೆಗಳ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ.
ಕೊರೊನಾ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ೧ ರಿಂದ ೯ನೇ ತರಗತಿ ಮಕ್ಕಗೆ ಪರೀಕ್ಷೆ ನಡೆಸಬೇಕೇ ಬೇಡವೇ ಎಂಬ ಬಗ್ಗೆ ಈ ಸಭೆಯಲ್ಲಿ ಚರ್ಚಿಸಿ ಒಂದು ತೀರ್ಮಾನಕೈಗೊಳ್ಳಲಾಗುತ್ತದೆ.
ಕೊರೊನಾ ಹೆಚ್ಚಾದ ಹಿನ್ನೆಲೆಯಲ್ಲಿ ೬ ರಿಂದ ೯ರವರೆಗಿನ ಭೌತಿಕ ತರಗತಿಗಳನ್ನು ಈಗಾಗಲೇ ರದ್ದು ಮಾಡಲಾಗಿದೆ. ೧೦ನೇ ತರಗತಿಗಳು ಮಾತ್ರ ಈಗ ನಡೆದಿವೆ. ಹಾಗಾಗಿ, ೧ ರಿಂದ ೯ನೇ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ನಡೆಯುವ ಬಗ್ಗೆ ಗೊಂದಲಗಳು ಮೂಡಿದ್ದು, ಪರೀಕ್ಷೆಗಳು ನಡೆಯುತ್ತದೋ ಇಲ್ಲವೋ ವಿದ್ಯಾರ್ಥಿಗಳನ್ನು ಮೌಲ್ಯಾಂಕಗಳ ಮೇಲೆ ಉತ್ತೀರ್ಣ ಮಾಡಲಾಗುತ್ತಿದೆಯೇ ಎಂಬ ಪ್ರಶ್ನೆಗಳಿಗೆ ನಾಳಿನ ಸಭೆಯಲ್ಲಿ ಉತ್ತರ ಸಿಗಲಿದೆ.
ಮಹಾರಾಷ್ಟ್ರ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಕೊರೊನಾ ಹೆಚ್ಚಾದ ಹಿನ್ನೆಲೆಯಲ್ಲಿ ೧ ರಿಂದ ೯ನೇ ತರಗತಿವರೆಗೆ ಪರೀಕ್ಷೆಗಳನ್ನು ನಡೆಸದೆ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗಳಿಗೆ ಉತ್ತೀರ್ಣ ಂಆಡುವ ತೀರ್ಮಾನ ಕೈಗೊಳ್ಳಲಾಗಿದೆ. ರಾಜ್ಯದಲ್ಲೂ ಇದೇ ರೀತಿಯ ತೀರ್ಮಾನಗಳು ಕೈಗೊಳ್ಳಬೇಕು ಎಂಬ ಒತ್ತಡಗಳು ಹೆಚ್ಚಿವೆ.
ಕಳೆದ ವರ್ಷ ಸಹ ಕೊರೊನಾದಿಂದ ೧ ರಿಂದ ೯ನೇ ತರಗತಿವರೆಗೆ ಪರೀಕ್ಷೆಗಳನ್ನು ನಡೆಸದೆ ಉತ್ತೀರ್ಣ ಮಾಡಲಾಗಿತ್ತು. ೧೦ನೇ ತರಗತಿ ಮತ್ತು ದ್ವಿತೀಯ ಪಿಯುಸಿಗೆ ಮಾತ್ರ ಕೊರೊನಾ ನಡುವೆಯೇ ಯಶಸ್ವಿಯಾಗಿ ಪರೀಕ್ಷೆಗಳನ್ನು ನಡೆಸಲಾಗಿತ್ತು. ಹಾಗೆಯೇ ಅಂತಿಮ ಪದವಿ ಪರೀಕ್ಷೆ ಹೊರತುಪಡಿಸಿ ಉಳಿದ ಪದವಿ ತರಗತಿಗಳ ಪರೀಕ್ಷೆಗಳನ್ನು ನಡೆಸದೆ ವಿದ್ಯಾರ್ಥಿಗಳನ್ನು ತೇರ್ಗಡೆ ಮಾಡುವ ತೀರ್ಮಾನವನ್ನು ಕಳೆದ ವರ್ಷ ಕೈಗೊಳ್ಳಲಾಗಿತ್ತು.
ಬೇಕೇ, ಬೇಡವೇ ಎಂಬ ಬಗ್ಗೆ ನಾಳೆ ನಡೆಯಲಿರುವ ಶಿಕ್ಷಣ ಇಲಾಖೆಯ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುತ್ತದೆ.
ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾದ ಹಿನ್ನೆಲೆಯಲ್ಲಿ ೬ ರಿಂದ ೯ನೇ ತರಗತಿಗಳ ಭೌತಿಕ ತರಗತಿಗಳನ್ನು ಈಗಾಗಲೇ ಬಂದ್ ಮಾಡುವ ತೀರ್ಮಾನ ಕೈಗೊಳ್ಳಲಾಗಿದೆ. ಹಾಗಾಗಿ ೧ ರಿಂದ ೯ನೇ ತರಗತಿಯವರೆಗೆ ಪರೀಕ್ಷೆಗಳು ನಡೆಯುತ್ತದೆಯೋ ಇಲ್ಲವೋ ಎಂಬ ಬಗ್ಗೆ ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಸಾಕಷ್ಟು ಗೊಂದಲಗಳು ಮೂಡಿವೆ.
೧ ರಿಂದ ೯ನೇ ತರಗತಿಯ ಮಕ್ಕಳಿಗೆ ಪರೀಕ್ಷೆ ನಡೆಸಬೇಕೇ, ಬೇಡವೇ ಎಂಬ ಬಗ್ಗೆ ಶಿಕ್ಷಣ ಸಚಿವ ಎಸ್. ಸುರೇಶ್‌ಕುಮಾರ್ ನಾಳೆ ಶಿಕ್ಷಣ ಇಲಾಖೆಯ ಮಹತ್ವದ ಸಭೆಯನ್ನು ಕರೆದಿದ್ದು, ಪರೀಕ್ಷೆ ನಡೆಸಬೇಕೇ, ಬೇಡವೇ ಎಂಬ ಬಗ್ಗೆ ಚರ್ಚಿಸಲಿದ್ದಾರೆ.
ಶಿಕ್ಷಣ ಸಚಿವರು ನಾಳೆ ಕರೆದಿರುವ ಸಭೆಯಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಿಕ್ಷಣ ತಜ್ಞರು, ಖಾಸಗಿ ಶಾಲೆಗಳ ಒಕ್ಕೂಟದ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ.
ನಾಳಿನ ಸಭೆಯಲ್ಲಿ ೧ ರಿಂದ ೯ನೇ ತರಗತಿಗಳಿಗೆ ಪರೀಕ್ಷೆ ನಡೆಸಬೇಕೇ, ಬೇಡವೇ ಎಂಬ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ.
ನಾಳಿನ ಸಭೆಯ ನಂತರ ೧ ರಿಂದ ೯ನೇ ತರಗತಿಗಳಿಗೆ ಪರೀಕ್ಷೆಗಳು ನಡೆಯತ್ತವೋ, ಇಲ್ಲವೋ ಎಂಬುದು ಸ್ಪಷ್ಟವಾಗುತ್ತವೆ.
ಕಳೆದ ವರ್ಷ ಸಹ ಕೋವಿಡ್‌ನಿಂದ ೧ ರಿಂದ ೯ನೇ ತರಗತಿವರೆಗಿನ ಮಕ್ಕಳಿಗೆ ಪರೀಕ್ಷೆ ನಡೆಸದೆ ಮುಂದಿನ ತರಗತಿಗೆ ತೇರ್ಗಡೆ ಮಾಡಲಾಗಿತ್ತು. ಎಸ್ಸೇಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ನಡೆದಿತ್ತು. ಈ ಬಾರಿಯೂ ಅಂತಹದ್ದೇ ತೀರ್ಮಾನವಾಗುವ ಸಾಧ್ಯತೆಗಳು ಹೆಚ್ಚಿವೆ.
ಮಹಾರಾಷ್ಟ್ರ ಸೇರಿದಂತೆ ಕೆಲ ರಾಜ್ಯಗಳಲ್ಲಿ ಈಗಾಗಲೇ ೧ ರಿಂದ ೯ನೇ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸದೆ ತೇರ್ಗಡೆ ಮಾಡುವ ತೀರ್ಮಾನ ಕೈಗೊಳ್ಳಲಾಗಿದೆ.