1.52 ಕೋಟಿ ಮೌಲ್ಯದ ಚಿನ್ನ ವಶ

ಬೆಂಗಳೂರು,ನ.೨೨- ಗುದನಾಳದಲ್ಲಿ ಬಚ್ಚಿಟ್ಟುಕೊಂಡು ೧.೫೨ ಕೋಟಿ ಮೌಲ್ಯದ ಚಿನ್ನವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ೧೦ ಮಂದಿ ಪ್ರಯಾಣಿಕರನ್ನು ಪತ್ತೆ ಹಚ್ಚಿ ಬಂಧಿಸಿರುವ ಕಸ್ಟಮ್ಸ್ ಅಧಿಕಾರಿಗಳು ಚಿನ್ನವನ್ನ ವಶಕ್ಕೆ ಪಡೆದಿದ್ದಾರೆ.
ಕಳೆದ ನ. ೨೦ ರಂದು ಕೊಲಂಬೊದಿಂದ ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಪ್ರಯಾಣಿಕರನ್ನು ಅನುಮಾನದ ಮೇಲೆ ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದ್ದರು.
ತಪಾಸಣೆಯಲ್ಲಿ ೧೦ ಮಂದಿ ಪ್ರಯಾಣಿಕರು ತಮ್ಮ ಗುದನಾಳದಲ್ಲಿ ಪೆಸ್ಟ್ ರೂಪದಲ್ಲಿ ಚಿನ್ನವನ್ನ ಮರೆಮಾಚಿ ಕಳ್ಳಸಾಗಣೆ ಮಾಡುತ್ತಿರುವುದು ಪತ್ತೆಯಾಗಿದೆ.
ಆರೋಪಿಗಳಿಂದ ೩೦೬೬.೫೫ ಗ್ರಾಂ ತೂಕದ ೧,೫೧, ೭೯, ೪೧೨ ರೂ. ಮೌಲ್ಯದ ಚಿನ್ನವನ್ನ ಜಪ್ತಿ ಮಾಡಿಕೊಂಡು ಹೆಚ್ಚಿನ ವಿಚಾರಣೆಯನ್ನು ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.