10 ಮಂದಿಗೆ ಸೋಂಕು ಅಪಾರ್ಟ್‌ಮೆಂಟ್ ಸೀಲ್‌ಡೌನ್

ಬೆಂಗಳೂರು, ನ.೩೦- ಒಮಿಕ್ರಾನ್ ಸೋಂಕಿನ ಭೀತಿ ನಡುವೆ ರಾಜಧಾನಿ ಬೆಂಗಳೂರಿನಲ್ಲಿ ಬರ್ತ್ ಡೇ ಪಾರ್ಟಿಯಲ್ಲಿ ಭಾಗಿಯಾಗಿದ್ದ ಹತ್ತು ಮಂದಿಗೆ ಕೋವಿಡ್ ಸೋಂಕು ಕಾಣಿಸಿಕೊಂಡಿದೆ.
ನಗರದ ಕೋರಮಂಗಲದ ರಹೇಜ ರೆಸಿಡೆನ್ಸಿ ಅಪಾರ್ಟ್‌ಮೆಂಟ್‌ನಲ್ಲಿ ಬರ್ತ್ ಡೇ ಪಾರ್ಟಿ ಮಾಡಿದ್ದ ೧೦ ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಸದ್ಯ ಅಪಾರ್ಟ್ ಮೆಂಟ್ ಸೀಲ್ ಡೌನ್ ಮಾಡಲಾಗಿದೆ.
೧೬ ಜನ ಸೇರಿ ಬರ್ತ್ ಡೇ ಪಾರ್ಟಿ ಮಾಡಿದ್ದರು. ಇದರಲ್ಲಿ ಹತ್ತು ಮಂದಿಗೆ ಕರೋನಾ ಸೋಂಕು ದೃಢಪಟ್ಟಿದೆ.ಇನ್ನೂ, ಸ್ವಾಬ್ ಸ್ವೀಕರಿಸಿದ ಬಳಿಕ ಅಪಾರ್ಟ್ ಮೆಂಟ್ ನ ಫ್ಲಾಟ್ ಕಂಟೈನ್ಮೆಂಟ್ ಜೋನ್ ಎಂದು ಗುರುತಿಸಲಾಗಿದೆ ಎಂದು ಬಿಬಿಎಂಪಿ ಸಿಬ್ಬಂದಿ ತಿಳಿಸಿದ್ದಾರೆ.
ಅಪಾರ್ಟ್‌ಮೆಂಟ್‌ನ ಫ್ಲಾಟ್ ಜೊತೆಗೆ ಬರ್ತಡೆ ಪಾರ್ಟಿಗೆ ಬಂದಿರುವ ಸಂಬಂಧಿಕರ ಮನೆಗಳನ್ನೂ ಕಂಟೈನ್ಮೆಂಟ್ ಜೋನ್ ಎಂದು ಗುರುತು ಮಾಡಲಾಗಿದೆ.
ಇನ್ನು ಧಾರವಾಡದ ಎಸ್ ಡಿಎಂ ಮೆಡಿಕಲ್ ಕಾಲೇಜಿನಲ್ಲಿ ೩೦೦ ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಪತ್ತೆಯಾಗಿತ್ತು. ಇದೀಗ ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ೧೦ ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿರುವುದು ಆತಂಕ ಹೆಚ್ಚಿಸಿದೆ.