10 ಲಕ್ಷ ವೆಚ್ಚದ ಅಂಗನವಾಡಿ ಕೇಂದ್ರಕ್ಕೆ ಗುದ್ದಲಿಪೂಜೆ

ನಂಜನಗೂಡು:ಮಾ:30: ಇಲ್ಲಿನ ನಗರಸಭೆಗೆ ಸೇರಿದ 14 ನೇ ವಾರ್ಡಿನಲ್ಲಿ 10 ಲಕ್ಷ ವೆಚ್ಚದ ಅಂಗನವಾಡಿ ಕಾಮಗಾರಿಗೆ ಶಾಸಕ ಹರ್ಷವರ್ಧನ್ ಗುದ್ದಲಿ ಪೂಜೆ ನೆರವೇರಿಸಿದರು.
ನಂತರ ಮಾತನಾಡಿದ ಅವರು, ಅಂಗನವಾಡಿ ಕೇಂದ್ರ ಸ್ಥಾಪನೆಯಿಂದಾಗಿ ಮಹಿಳೆಯರು ಮತ್ತು ಮಕ್ಕಳಿಗೆ ವಿದ್ಯಾರ್ಜನೆ ಸಿಗಲಿದ್ದು, ಅವರ ಭವಿಷ್ಯ ಉಜ್ವಲವಾಗುತ್ತದೆ.
ಹಾಗಾಗಿ ಈ ಕೇಂದ್ರದ ಸದುಪಯೋಗ ಪಡಿಸಿಕೊಳ್ಳುವಂತೆ ಸಾರ್ವಜನಿಕರಲ್ಲಿ ಶಾಸಕರು ಮನವಿ ಮಾಡಿದರು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಮಹದೇವಸ್ವಾಮಿ ಉಪಾಧ್ಯಕ್ಷೆ ನಾಗಮಣಿ ಶಂಕರಪ್ಪ ವಾರ್ಡಿನ ತಾಲೂಕು ಅಧ್ಯಕ್ಷ ಮಹೇಶ್ ನಗರಾಧ್ಯಕ್ಷ ಶ್ರೀನಿವಾಸ್ ರೆಡ್ಡಿ ಸದಸ್ಯ ಪ್ರದೀಪ್ ಬಾಲಚಂದ್ರ ಸೇರಿದಂತೆ ಇತರರು ಇದ್ದರು.