10 ಸಾವಿರ ಪರಿಹಾರಕ್ಕೆ ಆಗ್ರಹಿಸಿ ಮೇ 21 ಕಟ್ಟಡ ಕಾರ್ಮಿಕರ ಪ್ರತಿಭಟನೆ

ಬೆಂಗಳೂರು, ಮೇ 19-ಎರಡನೆ‌ ಕೊವೀಡ್ ಅಲೆಗೆ ಸಿಲುಕಿನಿರುದ್ಯೋಗಿಗಳಾಗಿರುವ ರಾಜ್ಯದ ನೋಂದಾಯಿತ/ವಲಸೆ ಕಾರ್ಮಿಕರ ‌ಕಟ್ಟಡ ಕಾರ್ಮಿಕ ಕುಟುಂಬಗಳಿಗೆ ಪ್ರತಿ ತಿಂಗಳಿಗೆ 10 ಸಾವಿರ ಸಹಾಯಧನ ನೀಡಬೇಕೆಂಬ ಬೇಡಿಕೆಯನ್ನು ಮುಂದಿಟ್ಟುಕೊಂಡು ರಾಜ್ಯಾದ್ಯಂತ ನಿರ್ಮಾಣ ವಲಯದ ಕಾರ್ಮಿಕರು ಮೇ 15 ರಿಂದ ತೀವ್ರ ಹೋರಾಟ ನಡೆಸುತ್ತಿದ್ದರೂ‌ ಇದೀಗ ಸರ್ಕಾರ ಕೇವಲ ‌ರೂ 3000 ಪರಿಹಾರ ಘೋಷಿಸಿರುವುದಕ್ಜೆ ಕರ್ನಾಟಕ ಕಟ್ಟಡ ಕಾರ್ಮಿಕ ಸಂಘಗಳ ಸಮನ್ವಯ ಸಮಿತಿ ಬೇಸರ ವ್ಯಕ್ತಪಡಿಸಿದೆ.
ಕೂಡಲೇ ಮಾರ್ಪಡು ಮಾಡಿ ನೋಂದಾಯಿತ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮುಂದಿನ ಮೂರು ತಿಂಗಳವರೆಗೆ ಮಾಸಿಕ‌ 10 ಸಾವಿರ ಪರಿಹಾರ ನೀಡಬೇಕೆಂದು ಸಮಿತಿ ಸರ್ಕಾರವನ್ನು ಆಗ್ರಹಿಸಿದೆ.

ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ಇದುವರೆಗೂ ಸುಮಾರು 9 ಸಾವಿರ ಕೋಟಿ ಸೆಸ್ ಸಂಗ್ರಹವಾಗಿದೆ. ವಾರ್ಷಿಕವಾಗಿ ಸುಮಾರು 600 ಕೋಟಿಯಷ್ಟು ‌ಸೆಸ್‌ ಸಂಗ್ರಹವಾಗುತ್ತಿದೆ ರಾಜ್ಯದ ಕಟ್ಟಡ ನಿರ್ಮಾಣ ವಲಯದ ಕಾರ್ಮಿಕರು ಕಳೆದ ಒಂದು ವರ್ಷದಿಂದ ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ ಕಳೆದ ಎರಡು ತಿಂಗಳಿಂದ ಮತ್ತೆ ಲಕ್ಷಾಂತರ ಕಾರ್ಮಿಕರು ನಿರುದ್ಯೋಗಿಗಳಾಗಿದ್ದಾರೆ. ಕನಿಷ್ಟ 4-5 ಜನರಿರುವ ಕುಟುಂಬಗಳಿಗೆ ವಾರಕ್ಕೆ ಕನಿಷ್ಟ 3000 ರುಪಾಯಿಗಳು ಅಗತ್ಯವಿದೆ ಎಂದು ಹೇಳಿದೆ.

ಈ ಹಿನ್ನಲೆಯಲ್ಲಿ ನಿರುದ್ಯೋಗಳಾಗಿರುವ ಕಟ್ಟಡ ಕಾರ್ಮಿಕರಿಗೆ ವಾರಕ್ಕೆ ಕನಿಷ್ಟ 2500 ರುಪಾಯಿ ಮತ್ತು ಮಾಸಿಕ ರೂ 10000 ಕೊವೀಡ್ ಪರಿಹಾರ ಕಲ್ಯಾಣ ಮಂಡಳಿಯಿಂದ ನೀಡಬೇಕೆಂಬುದು ಕಾರ್ಮಿಕರು ಮತ್ತು ಕಾರ್ಮಿಕ ಸಂಘಟನೆಗಳ ಆಗ್ರಹವಾಗಿತ್ತು.

ಆದರೆ ನಮ್ಮ ಬೇಡಿಕೆಯನ್ನು ಸರ್ಕಾರ ಭಾಗಶಃ ಮೂರನೇ ಒಂದು ಭಾಗವನ್ನು ಮಾತ್ರ ಈಡೇರಿಸಿದೆ ಇದು ಸ್ವಾಗತಾರ್ಹವಾದರೂ ಇದು ಕಟ್ಟಡ ಕಾರ್ಮಿಕರ ಬದುಕಿಗೆ ಕಿಂಚಿತ್ತೂ ಸಹಾಯವಾಗುವುದಿಲ್ಲ. ಇದನ್ನು 10 ಸಾವಿರಕ್ಕೆ ಹೆಚ್ಚಿಸಬೇಕು.ಇಲ್ಲದಿದ್ದರೆ ಮೇ 21 ರಂದು ಪ್ರತಿಭಟನೆ ನಡೆಸುವುದಾಗಿ ಸಮಿತಿ ಎಚ್ಚರಿಕೆ ನೀಡಿದೆ.