100 ದಿನ ಕಾರ್ಯಕ್ರಮಕ್ಕೆ ಮೋದಿ ಸರಣಿ ಸಭೆ

ನವದೆಹಲಿ,ಜೂ.೨- ಲೋಕಸಭೆಯಲ್ಲಿ ಎನ್‌ಡಿಎ ಮೂರನೇ ಬಾರಿಗೆ ಬಾರಿ ಬಹುಮತದೊಂದಿಗೆ ಕೇಂದ್ರದಲ್ಲಿ ಅಧಿಕಾರ ಹಿಡಿಯಲಿದೆ ಎಂದು ಸಮೀಕ್ಷೆಗಳು ಮಾಹಿತಿ ನೀಡಿರುವ ಹಿನ್ನೆಲೆಯಲ್ಲಿ ಮೂರನೇ ಅವಧಿಯ ೧೦೦ ದಿನದಲ್ಲಿ ಕೈಗೊಳ್ಳಬೇಕಾದ ಕಾರ್ಯಕ್ರಮಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಹತ್ವದ ಸರಣಿ ಸಭೆ ನಡೆಸಿದರು.
ಮೋದಿ ೩.೦ ರ ಮೊದಲ ೧೦೦ ದಿನಗಳಲ್ಲಿ ತೆಗೆದುಕೊಳ್ಳಬೇಕಾದ ಕ್ರಮಗಳು, ಅವುಗಳ ಅನುಷ್ಠಾನ, ಅಧಿಕಾರಿಗಳ ಸಿದ್ಧತೆ ಸೇರಿದಂತೆ ಇನ್ನಿತರೆ ವಿಷಯಗಳ ಕುರಿತು ಇಂದು ದಿನವಿಡಿ ಸಭೆ ನಡೆಸಿದ ೧೦೦ ದಿನಗಳಿಗೆ ಸಿದ್ಧತೆ ಮಾಡಿಕೊಳ್ಳಲು ಕಟ್ಟಿನಿಟ್ಟಿನ ಸೂಚನೆ ನೀಡಿದ್ದಾರೆ.
ಲೋಕಸಭೆಯ ಚುನಾವಣಾ ಪ್ರಚಾರ ಪ್ರಾರಂಭಿಸುವ ಮೊದಲು, ಪ್ರಧಾನಿ ನರೇಂದ್ರ ಮೋದಿ ಅವರು ಉನ್ನತ ಅಧಿಕಾರಿಗಳಿಗೆ ಹೊಸ ಸರ್ಕಾರದ ೧೦೦ ದಿನದ ಕಾರ್ಯಯೋಜನೆ ರೂಪಿಸುವಂತೆ ಸೂಚಿಸಿದ್ದರು. ಅದರ ಭಾಗವಾಗಿ ಇಂದು ಸಭೆ ನಡೆಸಿ ಏನೆಲ್ಲಾ ಸಿದ್ದತೆ ಮಾಡಿಕೊಳ್ಳಲಾಗಿದೆ ಎನ್ನುವ ಕುರೊತು ಮಾಹಿತಿ ಪಡೆದರು.
ಸರ್ಕಾರದ ಮೊದಲ ೧೦೦ ದಿನಗಳಲ್ಲಿ ಎಲ್ಲಾ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುವುದು ಮತ್ತು ೨೦೨೯ ರ ಚುನಾವಣೆಗೆ ಮೊದಲು ೧೦೦ ದಿನಗಳ ಕಾಲ ಕಾಯುವುದಿಲ್ಲ ಎಂದು ಅವರು ಅಧಿಕಾರಿಗಳಿಗೆ ಸ್ಪಷ್ಟಪಡಿಸಿದ್ದರು.
ಮೊದಲ ೧೦೦ ದಿನಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಯಾವ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು ಎಂಬುದನ್ನು ಅಧಿಕಾರಶಾಹಿ ಸಿದ್ಧಪಡಿಸಿದೆ, ವಿಕಸಿತ ಭಾರತದ ಗಮನದಲ್ಲಿಟ್ಟುಕೊಂಡು ಪ್ರಮುಖ ಉದ್ಯೋಗಗಳಿಗೆ ನೇಮಕಾತಿ ಸೇರಿದಂತೆ ಹಲವು ಮಹತ್ವದ ನಿರ್ಧಾರ ಕೈಗೊಳ್ಳಲು ಮುಂದಾಗಿದ್ದಾರೆ.
ಅಭಿವೃದ್ಧಿ ಹೊಂದಿದ ಭಾರತ ನಿರ್ಮಾಣ, ಸ್ವಾವಲಂಬನೆ ಮತ್ತು ದೇಶೀಯ ಉತ್ಪಾದನೆಗೆ ಆದ್ಯತೆಯೊಂದಿಗೆ ಭಾರತದ ಮಿಲಿಟರಿ-ಕೈಗಾರಿಕಾ ಸಂಕೀರ್ಣದ ಅಭಿವೃದ್ಧಿಯಾಗಿದೆ. ದೇಶೀಯ ಮಿಲಿಟರಿ-ನಾಗರಿಕ ಉತ್ಪಾದನೆಯನ್ನು ಪ್ರೋತ್ಸಾಹಿಸಲಾಗುತ್ತದೆ ಮತ್ತು ಭಾರತೀಯ ವೇದಿಕೆಗಳು ಮತ್ತು ಭಾರತೀಯ ಐಪಿಗಳಿಗೆ ಆದ್ಯತೆ ನೀಡಲಾಗುವುದು ಎಂದು ತಿಳಿಸಲಾಗಿದೆ.
ಜುಲೈ ಮೊದಲವಾರ ಸಚಿವ ಸಂಪುಟ ರಚನೆ
ಕೇಂದ್ರದಲ್ಲಿ ಮೂರನೇ ಬಾರಿಗೆ ಅಧಿಕಾರ ಸ್ವೀಕಾರ ಮಾಡಿದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಹೊಸ ಕ್ಯಾಬಿನೆಟ್ ಅನ್ನು ಜುಲೈ ಮೊದಲ ವಾರದಲ್ಲಿ ಕೇಂದ್ರ ಬಜೆಟ್ ಮಂಡಿಸಿದ ನಂತರ ವಿಸ್ತರಿಸಲು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪ್ರಧಾನಿ ಅವರ ಪ್ರಧಾನ ಕಾರ್ಯದರ್ಶಿ ಡಾ.ಪಿ.ಕೆ.ಮಿಶ್ರಾ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮೂರನೇ ಅವಧಿಗೆ ಮುಂದುವರಿಯುವ ಸಾಧ್ಯತೆ ಇದೆ.
ತಿಂಗಳು ಮಾಡಬೇಕಾದ ಪ್ರಮುಖ ನೇಮಕಾತಿಗಳು ಹೊಸ ಸೇನಾ ಮುಖ್ಯಸ್ಥ ಮತ್ತು ಇಂಟೆಲಿಜೆನ್ಸ್ ಬ್ಯೂರೋ ನಿರ್ದೇಶಕರ ಪ್ರಮುಖ ಹುದ್ದೆಗಳನ್ನು ನೇಮಕ ಮಾಡಲು ಉದ್ದೇಶಿಸಿದ್ದಾರೆ ಎನ್ನಲಾಗಿದೆ.