100 ಹಾಸಿಗೆಗಳ ತಾಯಿ-ಮಕ್ಕಳ ಆರೈಕೆ ಆಸ್ಪತ್ರೆಗೆ ಸಿಎಂ ಚಾಲನೆ

ಬೀದರ:ಜ.6:ಬೀದರ್ ನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ 100 ಹಾಸಿಗೆಗಳ ಸೌಲಭ್ಯಯುಳ್ಳ ತಾಯಿ ಮತ್ತು ಮಕ್ಕಳ ಆರೈಕೆ ಆಸ್ಪತ್ರೆ ಮತ್ತು ಇನ್ನಿತರ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಯನ್ನು ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಬಿ.ಎಸ್. ಯಡಿಯೂರಪ್ಪ ಅವರು ನೆರವೇರಿಸಿದರು.
20ಕೋಟಿ ರೂ. ವೆಚ್ಚದ 100 ಬೆಡ್ ನ ಆಸ್ಪತ್ರೆ,5.22 ಕೋಟಿ ರೂ, ನ ಬೀದರ್ ಇಂಜಿನಿಯರಿಂಗ್ ಕಾಲೇಜು ಹಾಸ್ಟೆಲ್, 4.90 ಕೋಟಿ ವೆಚ್ಚದ ಬೀದರ್ ಸರ್ಕಾರಿ ಶೂಶುಷ್ರ ಶಾಲೆ,ಕಾಲೇಜು ಕಟ್ಟಡ ಹಾಗೂ ವಿದ್ಯಾರ್ಥಿಗಳಿಗ ವಸತಿ ನಿಲಯ ನಿರ್ಮಾಣ, 2.50 ಕೋಟಿ ರೂ. ವೆಚ್ಚದ ಗ್ರಾಮೀಣ ಸಂತೆಗಳ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆಗೈದರು.
ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿಗಳು ಹಾಗೂ ಸಾರಿಗೆ ಇಲಾಖೆ ಸಚಿವ ಶ್ರೀ ಲಕ್ಷ್ಮಣ್ ಸವದಿ,ಪಶು ಸಂಗೋಪನೆ, ಹಜ್ ಮತ್ತು ವಕ್ಫ್ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಪ್ರಭು ಬಿ. ಚವ್ಹಾಣ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವ ಡಾ. ಕೆ ಸುಧಾಕರ್, ಸಂಸದ ಭಗವಂತ ಖೂಬಾ, ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಇನ್ನಿತರರು ಹಾಜರಿದ್ದಾರು.