
ಅಥಣಿ :ಆ.5: ತಾಲೂಕಿನ ಕೊಕಟನೂರ ಗ್ರಾಮದ ಪಶು ವೈದ್ಯಕೀಯ ಮಹಾವಿದ್ಯಾಲಯ ಉದ್ಘಾಟನೆಗೆ ಬರುವ ಆ.11ರಂದು ಬೆಳಗ್ಗೆ 10 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹಾಗೂ ಶಾಸಕ ಲಕ್ಷ್ಮಣ ಸವದಿ ಶುಕ್ರವಾರ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಆನಂತರ ಕೊಕಟನೂರ ಗ್ರಾಮದಲ್ಲಿ ನಡೆಯುವ ಕಾರ್ಯಕ್ರಮದ ಕುರಿತು ತಾಲೂಕಾ ಅಧಿಕಾರಿಗಳ ಜತೆ ಪೂರ್ವಭಾವಿ ಸಭೆ ನಡೆಸಿದರು
ಈ ವೇಳೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಮಾತನಾಡಿ, ಸಿಎಂ, ಡಿಸಿಎಂ ಜೊತೆ ಆರು ಜನ ಸಚಿವರುಗಳು ಆಗಮಿಸಿ ಪಶು ವೈದ್ಯಕೀಯ ಮಹಾವಿದ್ಯಾಲಯ ಉದ್ಘಾಟನೆ ಸೇರಿದಂತೆ ಅಥಣಿ ತಾಲೂಕಿನ ವಿವಿಧ ಇಲಾಖೆಗಳ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ತಾಲೂಕಾ ಅಧಿಕಾರಿಗಳು ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಕಲ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಿದರು,
ಈ ಸಂದರ್ಭದಲ್ಲಿ ಶಾಸಕ ಲಕ್ಷ್ಮಣ ಸವದಿ ಮಾತನಾಡಿ, ಕೊಕಟನೂರ ಪಶು ವೈದ್ಯಕೀಯ ಮಹಾ ವಿದ್ಯಾಲಯದಲ್ಲಿ ನಡೆಯುವ ಸಿಎಂ, ಡಿಸಿಎಂ ಹಾಗೂ ಸಚಿವರುಗಳ ಕಾರ್ಯಕ್ರಮಕ್ಕೆ ಸುಮಾರು ಲಕ್ಷ ಜನ ಸೇರುವ ನಿರೀಕ್ಷೆಯಿದೆ. ಪೆÇಲೀಸ್ ಇಲಾಖೆಯವರು ಕಾರ್ಯಕ್ರಮಕ್ಕೆ ಆಗಮಿಸುವ ಜನರಿಗೆ ಸುಗಮ ಸಂಚಾರ ವ್ಯವಸ್ಥೆ ಸೇರಿದಂತೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.
ಈ ವೇಳೆ ಜಿಪಂ ಸಿಇಒ ಹರ್ಷಲ್ ಬೋಯರ್, ಚಿಕ್ಕೋಡಿ ಉಪವಿಭಾಗಾಧಿಕಾರಿ ಮಾಧವ ಗಿತ್ತೆ, ತಹಶೀಲ್ದಾರ್ ಬಿ.ಎಸ್. ಕಡಕಬಾವಿ, ತಾಪಂ ಇಒ ವೀರಣ್ಣ ವಾಲಿ, ಕೊಕಟನೂರ ಪಶು ವೈದ್ಯಕೀಯ ಮುಖ್ಯಾಧಿಕಾರಿ ಎನ್.ಎ. ಪಾಟೀಲ, ಪಶು ಸಂಗೋಪನಾಧಿಕಾರಿ ರಾಜು ಕುಲೇರ, ಸಿಪಿಐ ರವೀಂದ್ರ ನಾಯ್ಕೋಡಿ, ಲೊಕೋಪಯೋಗಿ ಇಲಾಖೆಯ ಜಯಾನಂದ ಹಿರೇಮಠ, ಕೃಷಿ ಇಲಾಖೆಯ ನಿಂಗನಗೌಡ ಬಿರಾದಾರ, ಅರಣ್ಯ ಇಲಾಖೆಯ ಪ್ರಶಾಂತ ಗಾಣಿಗೇರ, ಸೇರಿದಂತೆ ಹಲವರು ಉಪಸ್ಥಿತರಿದ್ದರು,