11 ರಂದು ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

ಅಥಣಿ:ಜ.9: ಕೆÀಎಲ್‍ಇ ಸಂಸ್ಥೆಯ ಎಸ್‍ಎಂಎಸ್ ಮಹಾವಿದ್ಯಾಲಯದಲ್ಲಿ ಬರುವ ಬುಧವಾರ ದಿ. 11ರಂದು ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಎಸ್‍ಎಂಎಸ್ ಮಹಾವಿದ್ಯಾಲಯದ ಸ್ಥಾನಿಕ ಆಡಳಿತ ಮಂಡಳಿಯ ಅಧ್ಯಕ್ಷ ಹಾಗೂ ಹಿರಿಯ ವೈದ್ಯ ಡಾ. ಮಲ್ಲಿಕಾರ್ಜುನ ಹಂಜಿ ತಿಳಿಸಿದರು.
ಅವರು ಶುಕ್ರವಾರ ಇಲ್ಲಿನ ಎಸ್‍ಎಂಎಸ್ ಮಹಾವಿದ್ಯಾಲಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರದ ಕರಪತ್ರ ಬಿಡುಗಡೆಗೊಳಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು. ಕೆÀಎಲ್‍ಇ ಸಂಸ್ಥೆಯ ಕಾರ್ಯಧ್ಯಕ್ಷರಾದ ಡಾ. ಪ್ರಭಾಕರಣ್ಣಾ ಕೋರೆ ಅವರ ಜನ್ಮದಿನದ ಅಮೃತ ಮಹೋತ್ಸವದ ಅಂಗವಾಗಿ ಕೆÀಎಲ್‍ಇ ವಿಶ್ವವಿದ್ಯಾಲಯ, ಜವಾಹರಲಾಲ್ ನೆಹರು ವೈದ್ಯಕೀಯ ಮಹಾವಿದ್ಯಾಲಯ, ಡಾ. ಪ್ರಭಾಕರ್ ಕೋರಿ ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಕೇಂದ್ರ ಬೆಳಗಾವಿ ಹಾಗೂ ಅಥಣಿ ಪಟ್ಟಣದಕೆÀಎಲ್‍ಇಅಂಗ ಸಂಸ್ಥೆಗಳ ಸಹಯೋಗದಲ್ಲಿ ಈ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಈ ಶಿಬಿರದಲ್ಲಿ ಬೆಳಗಾವಿಯ ಕೆÀಎಲ್‍ಇ ಆಸ್ಪತ್ರೆಯಿಂದ 140ಕ್ಕೂ ಅಧಿಕ ತಜ್ಞ ವೈದ್ಯರು ಆಗಮಿಸಲಿದ್ದಾರೆ. ವೈದ್ಯಕೀಯ ತಪಾಸಣೆ, ಶಸ್ತ್ರ ಚಿಕಿತ್ಸೆ, ಬಿಪಿ ಮತ್ತು ಇಸಿಜಿ ರಕ್ತ ತಪಾಸಣೆ ಮತ್ತು ಉಚಿತ ಔಷಧಿ ನೀಡುವ ವ್ಯವಸ್ಥೆ ಇದೆ. ಅಥಣಿ ಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ಹಳ್ಳಿಗಳ ನಾಗರಿಕರು ಈ ಸಮೀರದ ಸದುಪಯೋಗ ಪಡೆದುಕೊಳ್ಳಬೇಕು. ಶಿಬಿರಕ್ಕೆ ಬರುವಾಗ ಕಡ್ಡಾಯವಾಗಿ ಆಧಾರ್ ಕಾರ್ಡ್, ರೇಷನ್ ಕಾರ್ಡ್ ಜೆರಾಕ್ಸ್ ಪ್ರತಿಯನ್ನು ತರಬೇಕು. ಸರ್ಕಾರದ ವಿಶೇಷ ಯೋಜನೆ ಅಡಿ ಶಸ್ತ್ರ ಚಿಕಿತ್ಸೆ ಪಡೆದುಕೊಳ್ಳುವವರು ಆಯುಷ್ಮಾನ್ ಯೋಜನೆ, ಯಶಸ್ವಿನಿ ಯೋಜನೆ, ಆರೋಗ್ಯ ಭಾಗ್ಯ ಯೋಜನೆಯ ಲಾಭ ಪಡೆದುಕೊಳ್ಳಬಹುದಾಗಿದೆ ಎಂದು ಹೇಳಿದರು.
ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಬಿಎಸ್ ಕಾಂಬಳೆ ಮಾತನಾಡಿ ಬೃಹತ್ ಉಚಿತ ಆರೋಗ್ಯ ತಪಾಸಣೆ ಶಿಬಿರಕ್ಕಾಗಿ ಮಹಾವಿದ್ಯಾಲಯದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ತಾಲೂಕಿನ ಪ್ರತಿ ಹಳ್ಳಿಗಳಲ್ಲಿ ನಮ್ಮ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಮೂಲಕ ಹೆಸರು ನೋಂದಾವಣೆ ಮಾಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮತ್ತು ಹೆಸರು ನೋಂದಾವಣೆಗಾಗಿ ಮೊಬೈಲ್ ಸಂಖ್ಯೆ 9353008029,9448338015,9448121845 ಸಂಪರ್ಕಿಸುವಂತೆ ಕೋರಿದ್ದಾರೆ.
ಈ ವೇಳೆ ಸಿಎಸ್‍ಕೆ ಪ್ರೌಢ ಶಾಲೆಯ ತಾನಿಕ ಆಡಳಿತ ಮಂಡಳಿಯ ಅಧ್ಯಕ್ಷ ಅಲ್ಲಪ್ಪಣ್ಣ ನಿಡೋಣಿ, ಮಹಾವಿದ್ಯಾಲಯದ ಸ್ಥಾನಿಕ ಆಡಳಿತ ಮಂಡಳಿಯ ಸದಸ್ಯರಾದ ಶಂಭು, ಮಮದಾಪುರ, ಪ್ರಕಾಶಗೌಡ ಪಾಟೀಲ, ಉಪ ಪ್ರಾಚಾರ್ಯ ಡಾ. ಪ್ರಶಾಂತ ಮಗದುಮ್ಮ, ಮುಖ್ಯೋಪಾಧ್ಯಾಯ ಎಸ್ ಜಿ ಸಲಗರೆ, ಪರಮಾನಂದ ನಾಯಕ, ಆರ್. ಎ. ಶಿಂಧೆ, ಆರ್.ಎನ್. ಇನಾಮದಾರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.