11 ರಂದು `ಶೋಭಾಯಾನ’ ಅಭಿನಂದನ ಗ್ರಂಥ ಬಿಡುಗಡೆ

ಕಲಬುರಗಿ,ಮಾ.08: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತ' ಶ್ರೀ ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಂಸ್ಥೆ ಸಂಚಾಲಿತ ನೃಪತುಂಗ ಪದವಿ ಮಹಾವಿದ್ಯಾಲಯದ ಸಮಾಜಶಾಸ್ತ್ರ ಪ್ರಾಧ್ಯಾಪಕರಾದ ಪ್ರೊ.ಶೋಭಾದೇವಿ ಚೆಕ್ಕಿ ಅವರ ನಿವೃತ್ತಿಯ ಹಿನ್ನೆಲೆಯಲ್ಲಿಶೋಭಾಯಾನ’ ಅಭಿನಂದನ ಗ್ರಂಥ ಬಿಡುಗಡೆ ಸಮಾರಂಭವನ್ನು ಮಾ.11 ರಂದು ಬೆಳಿಗ್ಗೆ 11.30 ಕ್ಕೆ ಆಯೋಜಿಸಲಾಗಿದೆ.

ನೃಪತುಂಗ ಪದವಿ ಮಹಾವಿದ್ಯಾಲಯ ಸೇಡಂನ ಗ್ರಂಥಾಲಯ ಆವರಣದಲ್ಲಿ ಆಯೋಜಿಸಿರುವ ಈ ಕಾರ್ಯಕ್ರಮದಲ್ಲಿ ಪೂಜ್ಯ ಶ್ರೀ ಸದಾಶಿವ ಸ್ವಾಮಿಗಳು ಸಾನಿಧ್ಯ ವಹಿಸಿದ್ದರು. ಕಾಲೇಜು ಶಿಕ್ಷಣ ಇಲಾಖೆಯ ಪ್ರಾದೇಶಿಕ ಕಚೇರಿಯ ಜಂಟಿ ನಿರ್ದೇಶಕರಾದ ಪ್ರೊ.ಸಂಜಯಕುಮಾರ ಪಟ್ಟಣಕರ್ ಗ್ರಂಥ ಬಿಡುಗಡೆ ಮಾಡಲಿದ್ದಾರೆ. ಶಿಕ್ಷಣ ಸಮಿತಿ ಗೌರವಾಧ್ಯಕ್ಷರು ಮತ್ತು ಮಾಜಿಶಾಸಕರಾದ ಡಾ.ನಾಗರೆಡ್ಡಿ ಪಾಟೀಲ ಅಧ್ಯಕ್ಷತೆ ವಹಿಸುವರು.
ನಿವೃತ್ತ ಮುಖ್ಯೋಪಾಧ್ಯಾಯರು ಮತ್ತು ರಾಷ್ಟ್ರ ಸೇವಿಕಾ ಸಮಿತಿಯ ಉತ್ತರ ಕರ್ನಾಟಕ ಪ್ರಾಂತ್ಯ ಸಂಚಾಲಕರಾದ ಶ್ರೀಮತಿ ಬಸವಲಿಂಗಮ್ಮ ಪಾಟೀಲ ಮುಖ್ಯ ಅತಿಥಿಗಳಾಗಿರುವರು.
ಶೋಭಾಯಾನ' ಸಂಪಾದಕ ಮಹಿಪಾಲರೆಡ್ಡಿ ಮುನ್ನೂರ್ ಹಾಗೂ ವಿಶ್ರಾಂತ ಕನ್ನಡ ಪ್ರಾಧ್ಯಾಪಕರಾದ ಪ್ರೊ.ಪಾರ್ವತಿ ಬಸವಣ್ಣಪ್ಪ ಚೆಕ್ಕಿ ಉಪಸ್ಥಿತರಿರುವರು.ಶೋಭಾಯಾನ ಗ್ರಂಥದ 150 ಜನ ಲೇಖಕರಿಗೆ ಸನ್ಮಾನ ಮಾಡಿ ಗೌರವಿಸಲಾಗುವುದು.