ರಾಯಚೂರು, ಡಿ.೨೧- ಗ್ರಾಮ ಪಂಚಾಯತ್ ಚುನಾವಣೆಯ ಮತ ಎಣಿಕೆಗೆ ಸಂಬಂಧಿಸಿದಂತೆ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಮಾಸ್ಟರ್ ಟ್ರೈನರ್‌ಗಳಿಗೆ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಡಿ.೨೦ರ ಭಾನುವಾರ ತರಬೇತಿ ಹಮ್ಮಿಕೊಳ್ಳಲಾಗಿತ್ತು.
ಮತ ಎಣಿಕೆಯಲ್ಲಿ ಯಾವುದೇ ಲೋಪದೋಷಗಳಾಗದಂತೆ ಎಚ್ಚರ ವಹಿಸಬೇಕು, ಮತಪತ್ರಗಳನ್ನು ಸೂಕ್ಷ್ಮವಾಗಿ ಗಮನಿಸಬೇಕು ಹಾಗೂ ಅವುಗಳನ್ನು ಖಾತ್ರಿ ಪಡಿಸಿಕೊಂಡು ನಿಯಮಾವಳಿಗಳಲ್ಲಿ ಸೂಚಿಸಿರುವಂತೆ ಮತ ಎಣಿಕಾ ಪ್ರಕ್ರಿಯಗಳ ಕುರಿತು ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ತರಬೇತಿ ನೀಡುವಂತೆ ಅಪರ ಜಿಲ್ಲಾಧಿಕಾರಿ ಕೆ.ಎಚ್. ದುರುಗೇಶ್ ಅವರು ತಾಲ್ಲೂಕು ಮಟ್ಟದ ಮಾಸ್ಟರ್ ಟ್ರೈನರ್‌ಗಳಿಗೆ ಸಲಹೆ ನೀಡಿದರು.
ಜಿಲ್ಲಾ ಮಟ್ಟದ ತರಬೇತಿದಾರರಾದ ಸದಾಶಿವಪ್ಪ ಮತ ಎಣಿಕೆ ಕುರಿತು ಸಂಪೂರ್ಣ ತರಬೇತಿ ನೀಡಿದರು. ಚುನಾವಣಾ ಶಿರಸ್ತೆದಾರ ಜಾಕೀರ್ ಪಾಟೀಲ್ ಉಪಸ್ಥಿತರಿದ್ದರು.