ಕಳೆದ ವರ್ಷ ಸುರಿದ ಭಾರಿ ಮಳೆಯಿಂದಾಗಿ ಸವದತ್ತಿ-ಧಾರವಾಡ ಸಂಪರ್ಕಿಸುವ ಸೇತುವೆ ಕೊಚ್ಚಿ ಹೋಗಿದ್ದರ ಪರಿಣಾಮ ಇನಾಮಹೊಂಗಲ್ ಹತ್ತಿರ 4 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿ ಇತ್ತೀಚಿಗೆ ಉದ್ಘಾಟನೆಗೊಂಡ ಸೇತುವೆ ಕಾಮಗಾರಿಯನ್ನು ಇಂದು ಉಪಮುಖ್ಯಮಂತ್ರಿ ಹಾಗೂ ಲೋಕೋಪಯೋಗಿ ಸಚಿವರಾದ ಗೋವಿಂದ ಎಂ. ಕಾರಜೋಳ ವೀಕ್ಷಿಸಿದರು. ಈ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆಯ ಕಾರ್ಯ ನಿರ್ವಾಹಕ ಇಂಜಿನಿಯರ್ ಚೌಡಣ್ಣವರ್, ಸವದತ್ತಿ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ಎಚ್. ಎ. ಕದ್ರಾಪುರ್, ವಿ. ಎನ್. ಪಾಟೀಲ್ ಮತ್ತಿತರರು ಉಪಸ್ಥಿತರಿದ್ದರು.