119 ಕ್ವಿಂಟಾಲ್ ಪಡಿತರ ಅಕ್ಕಿ ಜಪ್ತಿ

ವಿಜಯಪುರ,ಅ.13-ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಾಗಾಟ ಮಾಡುತ್ತಿದ್ದ ವೇಳೆಯಲ್ಲಿ ಖಚಿತ ಮಾಹಿತಿ ಮೇರೆಗೆ ಪೆÇಲೀಸರು ಹಾಗೂ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಲಕ್ಷಾಂತರ ಮೌಲ್ಯದ ಅಕ್ಕಿಯನ್ನು ವಶಕ್ಕೆ ಪಡೆದುಕೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಹೋರ್ತಿ ಗ್ರಾಮದಲ್ಲಿ ನಡೆದಿದೆ.
ಲಾರಿ ಮಾಲೀಕ ಮೊಹಸೀನ್ ಅಲ್ಲಾಭಕ್ಷ ಚೌಧರಿ ಹಾಗೂ ಸೋಹೇಲ್ ರಶೀದ್ ಸಾಬ್ ಶೇಖ್ ಬಂಧಿತ ಆರೋಪಿಗಳು. ಇನ್ನು ಅಕ್ರಮವಾಗಿ 2.74 ಲಕ್ಷ ಮೌಲ್ಯದ 119 ಕ್ವಿಂಟಾಲ್ ಅಕ್ಕಿ ಹಾಗೂ ಒಂದು ಲಾರಿಯನ್ನು ಪೆÇಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಅಲ್ಲದೇ, ಪಡಿತರ ಅಕ್ಕಿಯನ್ನು ಅಕ್ರಮವಾಗಿ ಹೊರ್ತಿ ಮಾರ್ಗವಾಗಿ ಸೊಲ್ಲಾಪುರಕ್ಕೆ ತೆಗೆದುಕೊಂಡು ಹೋಗುವಾಗ ಖಚಿತ ಮಾಹಿತಿ ಆಧಾರಿಸಿ ಝಳಕಿ ಪೆÇಲೀಸರು ದಾಳಿಗೈದಿದ್ದಾರೆ. ಈ ಕುರಿತು ಝಳಕಿ ಪೆÇಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.