12ನೇ ಶತಮಾನದಲ್ಲಿ ಬಸವಾದಿ ಶರಣರು ಸಮಾನತೆಯಕೆಲಸ ಮಾಡಿದ್ದರು:ಎಸ್ಪಿ. ಚನ್ನಬಸವಣ್ಣ ಎಸ್.ಎಲ್

ಬೀದರ: ಫೆ. 29: 12 ನೇ ಶತಮಾನದಲ್ಲಿ ಬಸವಾದಿ ಶರಣರು ಯಾವುದೇ ಲಿಂಗ ತಾರತಮ್ಯ ಮಾಡದೇ ಪುರುಷ ಮತ್ತು ಮಹಿಳೆಯರಿಗೆ ಅಂದು ಸಮಾನ ಅವಕಾಶಗಳನ್ನು ನೀಡಿದ್ದರು ಎಂದು ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್ ಹೇಳಿದರು.
ಅವರು ಬುಧವಾರ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಬೀದರ ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮದ ಅನುಷ್ಠಾನ ಕುರಿತು ಪೆÇಲೀಸ್ ತನಿಖಾಧಿಕಾರಿಗಳಿಗೆ ಮತ್ತು ಅಕ್ಕಪಡೆ ಮಹಿಳಾ ವಿಶೇಷ ಪೆÇಲೀಸ್ ಘಟಕಕ್ಕೆ ಜಿಲ್ಲಾ ಮಟ್ಟದ ಒಂದು ದಿನದ ಸಂವೇದನಾಶೀಲ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮಹಿಳೆ ತಾಯಿಯಾಗಿ, ಸಹೋದರಿಯಾಗಿ, ಮಡದಿಯಾಗಿ ಹಲವಾರು ಜವಾಬ್ದಾರಿಗಳನ್ನು ನಿಭಾಯಿಸುತ್ತಾಳೆ ಮತ್ತು ಅವಳಿಗೆ ಪುರುಷರಿಗೆ ಇರುವಷ್ಟು ಸಮಾನ ಹಕ್ಕುಗಳಿಗೆ. ಯಾರು ಲಿಂಗ ತಾರತಮ್ಯ ಮಾಡಬಾರದು ಇದು ಕಾನೂನಿನ ಪ್ರಕಾರ ಅಫರಾದವಾಗುತ್ತದೆ ಎಂದು ಹೇಳಿದರು.
ಬೇಟಿ ಬಚಾವೋ ಬೇಟಿ ಪಡಾವೋ ಅರ್ಥಪೂರ್ಣ ಕಾರ್ಯಕ್ರಮ ಇಂದು ಹಮ್ಮಿಕೊಳ್ಳಲಾಗಿದೆ. ಮಹಿಳೆಯರು ಇಂದು ಎಲ್ಲಾ ರಂಗಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಉತ್ತರ ಕರ್ನಾಟಕ ಭಾಗದಲ್ಲಿ ಇನ್ನೂ ಬಾಲ್ಯ ವಿವಾಹ, ಬ್ರೂಣಲಿಂಗ ಪತ್ಯಯಂತಹ ಪ್ರಕರಣಗಳು ಅಲ್ಲಲ್ಲಿ ಕಂಡು ಬರುತ್ತಿದ್ದು ಇದನ್ನು ನಡೆಯದಂತೆ ಎಲ್ಲರೂ ನಿಗಾವಹಿಸಬೇಕೆಂದರು
ಬೀದರ ಜಿಲ್ಲೆಯಲ್ಲಿ ಅಕ್ಕಪಡೆ ಮಹಿಳಾ ಪೆÇಲೀಸರು ರಾಜ್ಯದಲ್ಲಿ ಮಾದರಿಯಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಈ ಪಡೆ ರಚನೆಯಾದ ನಂತರ ಜಿಲ್ಲೆಯಲ್ಲಿ ಮಹಿಳೆಯರ ಮೇಲಿನ ಅಫರಾಧಗಳ ಸಂಖ್ಯೆ ಕಡಿಮೆಯಾಗಿವೆ. ಈ ತಂಡ ಶಾಲೆಗಳಿಗೂ ಭೇಟಿ ನೀಡುತ್ತಿದೆ. ಈ ವರ್ಷ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ವಿಶೇಷವಾಗಿ ಅಕ್ಕಪಡೆ ಆಚರಿಸಲಿದೆ ಅವರಿಗಾಗಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ 35 ದ್ವಿಚಕ್ರ ವಾಹನಗಳ ಮಂಜುರಾತಿಗಾಗಿ ಪ್ರಸ್ತಾವನೆ ಸಲ್ಲಿಸಲಾಗಿತ್ತು ಮಂಜುರಾತಿ ಸಿಕ್ಕಿದೆ. ಯಾವುದೇ ಪ್ರಕರಣಗಳ ಮಾಹಿತಿ ಸಂಗ್ರಹಿಸುವಲ್ಲಿ ಪೆÇಲೀಸ್ ತನಿಖಾಧಿಕಾರಿಗಳ ಪಾತ್ರವು ಬಹಳ ಮುಖ್ಯವಾಗಿದೆ ಎಂದು ಹೇಳಿದರು.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಗುರುರಾಜ ಪ್ರಾಸ್ತಾವಿಕವಾಗಿ ಮಾತನಾಡಿ 2014 ರಿಂದ ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮ ನಡೆಯುತ್ತಿದೆ ಈ ಅಭಿಯಾನ ಉದ್ದೇಶ ಪುರುಷ ಮತ್ತು ಮಹಿಳೆಯರ ಲಿಂಗಾನುಪಾತ ಸಮಾನ ಮಾಡುವದರ ಜೊತೆಗೆ ಮಹಿಳಾ ಸಬಲೀಕರಣಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒತ್ತು ನೀಡುತ್ತಿವೆ ಹಾಗೂ ಕಡಿಮೆ ಲಿಂಗಾನುಪಾತ ಇರುವ ಜಿಲ್ಲೆಗಳಲ್ಲಿ ವಿವಿಧ ಇಲಾಖೆಗಳ ಸಹಯೋಗದಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತದೆ ಎಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ಹಿರಿಯ ಸ್ತ್ರೀ ರೋಗ ತಜ್ಞೆ ಡಾ. ಆರತಿ ರಘು ಅವರು ಹೆಣ್ಣು ಭ್ರೂಣ ಹತ್ಯ ತಡೆಗಟ್ಟುವಲ್ಲಿ ಪಿ.ಸಿ.ಪಿ.ಎನ್.ಡಿ.ಟಿ ಕಾಯ್ದೆಯಡಿಯಲ್ಲಿ ರಚಿಸಿರುವ ಜಿಲ್ಲಾ ಸಲಹಾ ಮಂಡಳಿಯ ಪಾತ್ರ ಕುರಿತು ವಿಶೇಷ ಉಪನ್ಯಾಸ ನೀಡಿದರು. ಲೋಕಾಯುಕ್ತ ಬೀದರ ವಿಶೇಷ ಸರಕಾರಿ ಅಭಿಯೋಜಕ ಕೇಶವರಾವ್ ಶ್ರೀ ಮಾಳೆ. ಪಿ.ಸಿ.ಪಿ.ಎನ್.ಡಿ.ಟಿ 1994 ಕಾಯ್ದೆ ಕುರಿತು ಮಾಹಿತಿ ನೀಡಿದರು.
ಈ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೆಶಕರಾದ ಪ್ರಭಾಕರ್, ಹೆಚ್ಚುವರಿ ಪೆÇಲೀಸ್ ಅಧೀಕ್ಷಕರಾದ ಮಹೇಶ ಮೇಘಣ್ಣವರ್, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ರಜಿಯಾ ಬಳಬಟ್ಟಿ, ಪ್ರಾದೇಶಿಕ ಸಂಯೋಜಕರು ರೋಟರಿ ಕ್ಲಬ್ ನ್ಯೂ ಸೆಂಚುರಿ ಬೀದರ ಡಾ. ರಘು ಕೃಷ್ಣಮೂರ್ತಿ, ಧನಲಕ್ಷ್ಮೀ ಪಾಟೀಲ, ಗೌರಿ ಶಂಕರ, ಅಕ್ಕಪಡೆ ಹಾಗೂ ಪೆÇಲೀಸ್ ತನಿಖಾಧಿಕಾರಿಗಳು ಸೇರಿದಂತೆ ಇತರೆ ಅಧಿಕಾರಿ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.