12 ಸದಸ್ಯರ ಅಮಾನತಿಗೆ ಮಾಯಾವತಿ ಆಕ್ಷೇಪ

ಲಖನೌ, ನ.೩೦- ರಾಜ್ಯಸಭೆಯಲ್ಲಿ ಅನುಚಿತ ವರ್ತನೆಗಾಗಿ ೧೨ ಮಂದಿ ಸದಸ್ಯರನ್ನು ಅಮಾನತುಗೊಳಿಸಿರುವ ವಿಷಯವನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು ಎಂದು ಬಿಎಸ್‌ಪಿ ನಾಯಕಿ ಮಾಯಾವತಿ ಸಲಹೆ ಮಾಡಿದ್ದಾರೆ.
ಸದಸ್ಯರ ಬಗ್ಗೆ ಇಂತಹ ಕಠಿಣ ನಿಲುವು ತೆಗೆದುಕೊಳ್ಳಬಾರದು ಎಂದು ಅವರು ಮನವಿ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದಸ್ಯರ ಅನುಚಿತ ವರ್ತನೆ ಮುಂಗಾರು ಅಧಿವೇಶನ ಸಂದರ್ಭದಲ್ಲಿ ನಡೆದಿದೆ. ಆದರೆ, ಚಳಿಗಾಲದ ಅಧಿವೇಶನದಲ್ಲಿ ಕ್ರಮಕೈಗೊಂಡಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು.
ಸಂಸದರ ಅಮಾನತು ಅನಗತ್ಯ ಮತ್ತು ಪ್ರಜಾಪ್ರಭುತ್ವ ವಿರೋಧಿಯಾಗಿದೆ. ಈ ಕ್ರಮ ರಾಜ್ಯಸಭೆಯ ಎಲ್ಲ ನಿಯಮಗಳು ಮತ್ತು ಕಾರ್ಯವಿಧಾನಗಳನ್ನು ಉಲ್ಲಂಘಿಸಿದೆ ಎಂದು ಮಾಯಾವತಿ ಕಿಡಿಕಾರಿದರು.
ಅಮಾನತುಗೊಂಡವರ ಸದಸ್ಯರ ಪೈಕಿ ಕಾಂಗ್ರೆಸ್‌ನ ೬, ತೃಣಮೂಲ ಕಾಂಗ್ರೆಸ್ ಮತ್ತು ಶಿವಸೇನೆಯ ತಲಾ ಒಬ್ಬರು ಮತ್ತು ಸಿಪಿಎಂನ ತಲಾ ಒಬ್ಬರು ಸದಸ್ಯರಿದ್ದಾರೆ.