ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇಂದು ರಾಷ್ಟ್ರ ಕವಿ ಕುವೆಂಪು ಅವರ ಜನ್ಮದಿನಾಚರಣೆ ನಿಮಿತ್ಯ ಜಿಲ್ಲಾಧಿಕಾರಿ ನಿತೇಶ ಪಾಟೀಲ, ಜಿ.ಪಂ.ಸಿಇಓ ಡಾ.ಸುಶೀಲಾ ಬಿ. ಉಪವಿಭಾಗಾಧಿಕಾರಿ ಡಾ.ಗೋಪಾಲ ಕೃಷ್ಣ ಬಿ., ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಎನ್.ಆರ್.ಪುರುಷೋತ್ತಮ, ಅಲ್ಪಸಂಖ್ಯಾತರ ಅಭಿವೃದ್ಧಿ ಇಲಾಖೆ ಜಿಲ್ಲಾ ಅಧಿಕಾರಿ ಅಬ್ದುಲ್ ಮಿರ್ಜನ್ನವರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಮಂಜುಳಾ ಯಲಿಗಾರ, ಜಿಲ್ಲಾ ಕಸಾಪ ಅಧ್ಯಕ್ಷ ಡಾ.ಲಿಂಗರಾಜ ಅಂಗಡಿ ಸೇರಿದಂತೆ ಕಸಪಾ ಜಿಲ್ಲಾ ಹಾಗೂ ತಾಲೂಕಾ ಘಟಕದ ಪದಾಧಿಕಾರಿಗಳು, ರಾಷ್ಟ್ರ ಕವಿ ಕುವೆಂಪು ಅವರ ಅಭಿಮಾನಿಗಳು ಕಾರ್ಯಕ್ರಮದ ಭಾಗವಹಿಸಿದ್ದರು.