
ಸಂಜೆವಾಣಿ ವಾರ್ತೆ
ಗಂಗಾವತಿ, ಮಾ.14: ರಾಮಭಕ್ತ ಹನುಮ ಜನಿಸಿದ ನಾಡು ಅಂಜನಾದ್ರಿಯನ್ನು ಅಭಿವೃದ್ಧಿ ಮಾಡುತ್ತಿರುವುದು ನಮ್ಮ ಬಿಜೆಪಿ ಸರಕಾರದ ಸೌಭಾಗ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ತಾಲೂಕಿನ ಹನುಮನ ಹಳ್ಳಿಯ ಆಂಜನಾದ್ರಿ ಬೆಟ್ಟದ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದ ಅಭಿವೃದ್ಧಿ ಕಾಮಗಾರಿಗಳ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.
ಅಂಜನಾದ್ರಿ ಅಭಿವೃದ್ಧಿಗೊಳಿಸಲು 125 ಕೋಟಿ ಅನುದಾನ ಮೀಸಲಿಟ್ಟಿದೆ. ಮೊದಲನೇದ್ದಾಗಿ ಎಲ್ಲಿ ಭೂಮಿಯನ್ನು ಸ್ವಾಧೀನ ಪಡೆದುಕೊಂಡಿದೆ ಅಲ್ಲಲ್ಲಿ ಕೆಲಸ ಪ್ರಾರಂಭ ಮಾಡಲಾಗುತ್ತದೆ. ಭಕ್ತರಿಗೆ ಉಳಿದುಕೊಳ್ಳಲು ವಸತಿ ವ್ಯವಸ್ಥೆ, ಪ್ರದಕ್ಷಣೆ ಪಥ ನಿರ್ಮಾಣ, ಶಾಪಿಂಗ್ ಕಾಂಪ್ಲೇಕ್ಸ್, ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಕಾಮಗಾರಿ ಆರಂಭ ಮಾಡಲಾಗುವುದು ಹಂತ ಹಂತವಾಗಿ ಭೂಮಿಯನ್ನು ಸ್ವಾಧೀನ ಪಡೆದ ನಂತರ ಮುಂದಿನ ಅಭಿವೃದ್ಧಿ ಕಾಮಗಾರಿ ಆರಂಭಿಸಲಾಗುವುದು. ಇಂತಹ ಪವಿತ್ರ ಸ್ಥಳವನ್ನು ಅಭಿವೃದ್ಧಿಗೊಳಿಸಲು ನಮ್ಮ ಸರಕಾರಕ್ಕೆ ಸಿಕ್ಕ ಸೌಭ್ಯಾಗ್ಯ, ಅಯೋದ್ಯಯಲ್ಲಿ ರಾಮಮಂದಿರ ನಿರ್ಮಾಣವಾಗುತ್ತಿದೆ ಅದೇ ರೀತಿ ರಾಮನ ಭಕ್ತ ಹನುಮನ ನಾಡನ್ನು ಅಭಿವೃದ್ಧಿಗೊಳಿಸಲಾಗುವುದು ಎಂದರು.
ಈ ವೇಳೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಆನಂದ ಸಿಂಗ್, ಸಚಿವರಾದ ಮುನಿರತ್ನ, ಹಾಲಪ್ಪ ಆಚಾರ್, ಶಾಸಕರಾದ ಪರಣ್ಣ ಮುನವಳ್ಳಿ, ಬಸವರಾಜ ದಢೇಸೂಗೂರು, ಸಂಸದ ಕರಡಿ ಸಂಗಣ್ಣ, ಜಿಲ್ಲಾಧಿಕಾರಿ ಎಂ. ಸುಂದರೇಶ ಬಾಬು, ಸಿಇಒ ರಾಹುಲ್ ರತ್ನಂ ಪಾಂಡೆ ಮುಖಂಡರಾದ ನೆಕ್ಕಂಟಿ ಸೂರಿಬಾಬು ಸೇರಿದಂತೆ ಅನೇಕರು ಇದ್ದರು.